ಶಾಹೀನ್ ಬಾಗ್ ಪ್ರತಿಭಟನಾ ಸ್ಥಳದ ಬಳಿ ಪೆಟ್ರೋಲ್ ಬಾಂಬ್ ಎಸೆತ
ನೂತನ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ ಮೂರು ತಿಂಗಳುಗಳಿಂದ ಮಹಿಳೆಯರು ಪ್ರತಿಭಟನೆ ನಡೆಸುತ್ತಿರುವ ಶಾಹೀನ್ ಬಾಗ್ ಸ್ಥಳದ ಬಳಿ ಇಂದು ಅಪರಿಚಿತ ವಯಕ್ತಿಗಳು ಪೆಟ್ರೋಲ್ ಬಾಂಬ್ ವೊಂದನ್ನು ಎಸೆದಿದ್ದಾರೆ

ನವದೆಹಲಿ: ನೂತನ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ ಮೂರು ತಿಂಗಳುಗಳಿಂದ ಮಹಿಳೆಯರು ಪ್ರತಿಭಟನೆ ನಡೆಸುತ್ತಿರುವ ಶಾಹೀನ್ ಬಾಗ್ ಸ್ಥಳದ ಬಳಿ ಇಂದು ಅಪರಿಚಿತರು ಪೆಟ್ರೋಲ್ ಬಾಂಬ್ ವೊಂದನ್ನು ಎಸೆದಿದ್ದಾರೆ
ಆದಾಗ್ಯೂ, ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 9-30ರ ಸುಮಾರಿನಲ್ಲಿ ಈ ಘಟನೆ ನಡೆದಿದೆ.ಪ್ರತಿಭಟನಾ ಸ್ಥಳದ ಬಳಿ ಪೆಟ್ರೋಲ್ ತುಂಬಿದ ಐದಾರು ಬಾಟಲಿಗಳನ್ನು ಪೊಲೀಸರ ತಂಡ ಪತ್ತೆ ಹಚ್ಚಿದೆ.
ಕೊರೋನಾ ವೈರಸ್ ಪ್ರಕರಣಗಳು ದೇಶದಲ್ಲಿ ಹೆಚ್ಚಾಗುತ್ತಿರುವಂತೆ ಇಂದು ಬೆಳಗ್ಗೆಯಿಂದ ರಾತ್ರಿಯವರೆಗೂ ಸಾರ್ವಜನಿಕರು ಮನೆಯಿಂದ ಹೊರಬಾರದಂತೆ ಜನತಾ ಕರ್ಫ್ಯೂಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಆದರೂ ಎನ್ ಆರ್ ಸಿ ಹಾಗೂ ಸಿಎಎ ವಿರೋಧಿಸಿ ಮಹಿಳೆಯರು ಶಾಹೀನ್ ಬಾಗ್ ನಲ್ಲಿ ಪ್ರತಿಭಟನೆ ಮುಂದುವರೆಸಿದ್ದರು.
ಕೊರೋನಾವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನೆ ತೆರವಿಗೆ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ನಾಳೆ ಈ ವಿಚಾರವನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


