ಕೊರೋನಾಗೆ ಮತ್ತೊಬ್ಬ ಬಲಿ: ಗುಜರಾತ್ ನಲ್ಲಿ ಮತ್ತೆ 11 ಪ್ರಕರಣ ಪತ್ತೆ, ದೇಶಾದ್ಯಂತ ಸೋಂಕಿತರ ಸಂಖ್ಯೆ 422ಕ್ಕೆ ಏರಿಕೆ
ಜನತಾ ಕರ್ಫ್ಯೂ ಹಾಗೂ ಲಾಕ್ ಡೌನ್ ಗೂ ಜಗ್ಗದ ಮಹಾಮಾರಿ ಕೋರಾನ ವೈರಸ್ ದೇಶಾದ್ಯಂತ ತೀವ್ರವಾಗಿ ಹರಡುತ್ತಿದ್ದು, ಗುಜರಾತ್ ನಲ್ಲಿ ಮತ್ತೆ ಹೊಸದಾಗಿ 11 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.

ನವದೆಹಲಿ: ಜನತಾ ಕರ್ಫ್ಯೂ ಹಾಗೂ ಲಾಕ್ ಡೌನ್ ಗೂ ಜಗ್ಗದ ಮಹಾಮಾರಿ ಕೋರಾನ ವೈರಸ್ ದೇಶಾದ್ಯಂತ ತೀವ್ರವಾಗಿ ಹರಡುತ್ತಿದ್ದು, ಗುಜರಾತ್ ನಲ್ಲಿ ಮತ್ತೆ ಹೊಸದಾಗಿ 11 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ ಗುಜರಾತ್ ನಲ್ಲಿ 29ಕ್ಕೆ ಹಾಗೂ ದೇಶಾದ್ಯಂತ 422ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಮುಂಬೈನಲ್ಲಿ ಮತ್ತೊಬ್ಬ ವ್ಯಕ್ತಿಯೊಬ್ಬರು ವೈರಸ್'ಗೆ ಬಲಿಯಾಗಿದ್ದಾರೆ. ಈ ಮೂಲಕ ಭಾರತದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಸೋಂಕು ಪೀಡಿತರ ಸಂಖ್ಯೆ 400ಕ್ಕೆ ಏರಿಕೆಯಾಗಿದೆ.
ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫಿಲಿಪ್ಪೀನ್ಸ್ ಪ್ರಜೆಯೊಬ್ಬರು ಮೃತಪಟ್ಟಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಭಾನುವಾರದ ಜನತಾ ಕರ್ಫ್ಯೂ ನಂತರ ಈಗ ದೇಶಾದ್ಯಂತ ಸೋಂಕಿತ ಜಿಲ್ಲೆಗಳಲ್ಲಿ ಲಾಕ್ ಡೌನ್ ಮಾಡಲಾಗಿದೆ. ಆದರೆ ಲಾಕ್ ಡೌನ್ ಅನ್ನು ಜನ ಗಂಭೀರವಾಗಿ ಪರಿಗಣಿಸುತ್ತಿಲ್ಲ.
ಕೊರೋನಾವೈರಸ್ ನಿಂದಾಗಿ ದೇಶಾದ್ಯಂತ 75 ಜಿಲ್ಲೆಗಳನ್ನು ಲಾಕ್ ಡೌನ್ ಮಾಡಲಾಗಿದೆ. ಕರ್ನಾಟಕ, ದೆಹಲಿ, ಪಂಜಾಬ್, ರಾಜಸ್ಥಾನ, ಮತ್ತು ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಾರ್ವಜನಿಕ ಸಾರಿಗೆ, ಮಾಲ್ ಗಳು, ಶಾಪ್ ಗಳನ್ನು ಈ ಮಾಸಾಂತ್ಯದವರೆಗೂ ಸ್ಥಗಿತಗೊಳಿಸಲಾಗಿದ್ದು, ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ.
ಕೇರಳ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಹೊಸ ಪ್ರಕರಣಗಳು ವರದಿಯಾಗುವುದರೊಂದಿಗೆ ದೇಶಾದ್ಯಂತ 390 ಕೊರೋನಾವೈರಸ್ ಪ್ರಕರಣಗಳು ವರದಿಯಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


