ದೇಶ

ಕೋವಿಡ್-19: ದೇಶದಲ್ಲಿ 390 ಪಾಸಿಟಿವ್ , ದೆಹಲಿ, ಪಂಜಾಬ್, ತೆಲಂಗಾಣದಲ್ಲಿ ಸಂಪೂರ್ಣ ಲಾಕ್ ಡೌನ್ 

ಜಗತ್ತಿನಾದ್ಯಂತ ವ್ಯಾಪಕ ರೀತಿಯಲ್ಲಿ ಹಬ್ಬುತ್ತಿರುವ ಮಾರಕ ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಪ್ರಕರಣಗಳು ದೇಶದಲ್ಲೂ ಹೆಚ್ಚಾಗುತ್ತಿದ್ದು, ಈವರೆಗೂ 390 ಜನರಲ್ಲಿ ಈ ಸೋಂಕು ದೃಢಪಟ್ಟಿದೆ. ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆ ಆಗಿದೆ.

ಕೋವಿಡ್-19: ದೇಶದಲ್ಲಿ 390 ಪಾಸಿಟಿವ್ , ದೆಹಲಿ, ಪಂಜಾಬ್, ತೆಲಂಗಾಣದಲ್ಲಿ ಸಂಪೂರ್ಣ ಲಾಕ್ ಡೌನ್ 
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಜಗತ್ತಿನಾದ್ಯಂತ ವ್ಯಾಪಕ ರೀತಿಯಲ್ಲಿ ಹಬ್ಬುತ್ತಿರುವ ಮಾರಕ ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಪ್ರಕರಣಗಳು ದೇಶದಲ್ಲೂ ಹೆಚ್ಚಾಗುತ್ತಿದ್ದು, ಈವರೆಗೂ 390  ಜನರಲ್ಲಿ ಈ ಸೋಂಕು ದೃಢಪಟ್ಟಿದೆ. ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆ ಆಗಿದೆ.

ಕೊರೋನಾವೈರಸ್ ನಿಂದಾಗಿ 75 ಜಿಲ್ಲೆಗಳನ್ನು ಲಾಕ್ ಡೌನ್ ಮಾಡಲು ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ. ನವದೆಹಲಿ, ಪಂಜಾಬ್, ರಾಜಸ್ಥಾನ, ಮತ್ತು ತೆಲಂಗಾಣ ರಾಜ್ಯಗಳಲ್ಲಿ ಸಾರ್ವಜನಿಕ ಸಾರಿಗೆ, ಮಾಲ್ ಗಳು, ಶಾಪ್ ಗಳನ್ನು ಈ ಮಾಸಾಂತ್ಯದವರೆಗೂ  ಸ್ಥಗಿತಗೊಳಿಸಲಾಗಿದ್ದು, ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. 

ಅಂತಾರಾಜ್ಯ ಮಾರ್ಚ್ ಸೇವೆ ಸೇರಿದಂತೆ ಅಗತ್ಯಯೇತರ ಸೇವೆಗಳ ಮೇಲೂ ಮಾರ್ಚ್ 31ರವರೆಗೂ ನಿರ್ಭಂಧ ಹೇರಲಾಗಿದೆ. ದೆಹಲಿ, ಮುಂಬೈ, ಕೊಲ್ಕತ್ತಾ, ಬೆಂಗಳೂರು ಸೇರಿದಂತೆ ಮತ್ತಿತರ ಪ್ರಮುಖ ನಗರಗಳಲ್ಲಿ ಮಾರ್ಚ್ 31ರವರೆಗೆ ಎಲ್ಲಾ ಮೆಟ್ರೋ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. 

ಕೇರಳ, ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕದಲ್ಲಿ ಹೊಸ  ಪ್ರಕರಣಗಳು ವರದಿಯಾಗುವುದರೊಂದಿಗೆ ದೇಶಾದ್ಯಂತ 390 ಕೊರೋನಾವೈರಸ್ ಪ್ರಕರಣಗಳು ವರದಿಯಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.