ದೇಶ

ಸೈಲೆಂಟ್ ಆಗಿ 4ನೇ ಬಾರಿಗೆ ಮಧ್ಯಪ್ರದೇಶದ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಶಿವರಾಜ್ ಸಿಂಗ್ ಚೌಹಾಣ್‍!

ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡ ಶಿವರಾಜ್ ಸಿಂಗ್ ಚೌಹಾಣ್ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಸೈಲೆಂಟ್ ಆಗಿ 4ನೇ ಬಾರಿಗೆ ಮಧ್ಯಪ್ರದೇಶದ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಶಿವರಾಜ್ ಸಿಂಗ್ ಚೌಹಾಣ್‍!
ಜ್ಯೋತಿರಾಧಿತ್ಯ ಸಿಂಧಿಯಾ-ಶಿವರಾಜ್ ಸಿಂಗ್
Published On :

ಭೋಪಾಲ್: ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡ ಶಿವರಾಜ್ ಸಿಂಗ್ ಚೌಹಾಣ್ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಶಿವರಾಜ್ ಸಿಂಗ್ ಚೌಹಾಣ್ ಮಧ್ಯಪ್ರದೇಶದ 19ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇನ್ನು ಶಿವರಾಜ್ ಸಿಂಗ್ ಅವರು ನಾಲ್ಕನೇ ಬಾರಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. 

ಬಿಜೆಪಿ ರಾಜ್ಯ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಚೌಹಾಣ್ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿತ್ತು. 

ಬಿಜೆಪಿ ಶಾಸಕಾಂಗ ಪಕ್ಷದ ಮಹತ್ವದ ಸಭೆಯಲ್ಲಿ ಚೌಹಾನ್, ಬಿಜೆಪಿ ರಾಜ್ಯಾಧ್ಯಕ್ಷ ವಿಷ್ಣುದತ್ ಶರ್ಮಾ, ರಾಜ್ಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಸುಹಾಸ್‍ ಭಗತ್, ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ನರೋತ್ತಮ್ ಮಿಶ್ರಾ ಸೇರಿದಂತೆ 100ಕ್ಕೂ ಹೆಚ್ಚು ಶಾಸಕರು ಭಾಗವಹಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.