ದೇಶ

ಕೊರೋನಾ ವೈರಸ್: ಸೋಂಕಿಗೆ ಮುಂಬೈ ಮಹಿಳೆ ಬಲಿ, ಭಾರತದಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿಕೆ

ದೇಶದಲ್ಲಿ ಕೊರೋನಾ ವೈರಸ್ ತನ್ನ ಆರ್ಭಟವನ್ನು ಮುಂದುವರೆಸಿದೆ. ಸೋಂಕಿನಿಂದ ಬಳಲುತ್ತಿದ್ದ ಮುಂಬೈ ಮೂಲದ ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟಿದ್ದು, ಈ ಮೂಲಕ ಭಾರತದಲ್ಲಿ ವೈರಸ್ ನಿಂದ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಕೊರೋನಾ ವೈರಸ್: ಸೋಂಕಿಗೆ ಮುಂಬೈ ಮಹಿಳೆ ಬಲಿ, ಭಾರತದಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿಕೆ
ಸಂಗ್ರಹ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ತನ್ನ ಆರ್ಭಟವನ್ನು ಮುಂದುವರೆಸಿದೆ. ಸೋಂಕಿನಿಂದ ಬಳಲುತ್ತಿದ್ದ ಮುಂಬೈ ಮೂಲದ ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟಿದ್ದು, ಈ ಮೂಲಕ ಭಾರತದಲ್ಲಿ ವೈರಸ್ ನಿಂದ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. 

ಮುಂಬೈ ಮೂಲದ 65 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಈ ಹಿಂದೆ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಬಿಹಾರ, ದೆಹಲಿ, ಪಂಜಾಬ್ ರಾಜ್ಯದಲ್ಲಿ 7 ಮಂದಿ ಸಾವನ್ನಪ್ಪಿದ್ದರು. ನಿನ್ನೆ ಹೊಸದಾಗಿ ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶದಲ್ಲಿ ಇಬ್ಬರು ಸಾವನ್ನಪ್ಪಿದ್ದರು. 

ಯುಎಇಯಿಂದ ಕೆಲ ದಿನಗಳ ಹಿಂದಷ್ಟೇ ಮುಂಬೈಗೆ ವಾಪಸ್ಸಾಗಿದ್ದ ಮಹಿಳೆ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಮಹಿಳೆ ಸಾವನ್ನಪ್ಪಿದ್ದಾರೆಂದು ವರದಿಗಳಾಗಿವೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.