ದೇಶ

ಭಾರತದಲ್ಲಿ ಕೊರೋನಾ ಮರಣಮೃದಂಗ: ವೈರಸ್'ಗೆ 9 ಮಂದಿ ಬಲಿ, ಸೋಂಕಿತರ ಸಂಖ್ಯೆ 482ಕ್ಕೆ ಏರಿಕೆ

ಕೊರೋನಾ ದೇಶದಲ್ಲಿ ಮತ್ತಿಬ್ಬರನ್ನು ಬಲಿ ಪಡೆದುಕೊಂಡಿದ. ತಮಿಳುನಾಡು, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರ ರಾಜ್ಯಗಳ ಜನರಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 482ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಕೊರೋನಾ ಮರಣಮೃದಂಗ: ವೈರಸ್'ಗೆ 9 ಮಂದಿ ಬಲಿ, ಸೋಂಕಿತರ ಸಂಖ್ಯೆ 482ಕ್ಕೆ ಏರಿಕೆ
ಸಂಗ್ರಹ ಚಿತ್ರ
Published On :

ನವದೆಹಲಿ: ಕೊರೋನಾ ದೇಶದಲ್ಲಿ ಮತ್ತಿಬ್ಬರನ್ನು ಬಲಿ ಪಡೆದುಕೊಂಡಿದ. ತಮಿಳುನಾಡು, ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರ ರಾಜ್ಯಗಳ ಜನರಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 482ಕ್ಕೆ ಏರಿಕೆಯಾಗಿದೆ. 

ಪ್ರೆಸ್ ಇನ್'ಫಾರ್ಮೇಷನ್ ಬ್ರೂರೋ ಈ ಕುರಿತು ಮಾಹಿತಿ ನೀಡಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 482ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ. ಅಲ್ಲದೆ ದೇಶದ 30 ರಾಜ್ಯಗಳು, 548 ಜಿಲ್ಲೆಗಳು ಸೇರಿ ಕೇಂದ್ರಾಡಳಿತ ಪ್ರದೇಶಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ ಎಂದು ಹೇಳಿದೆ. 

ಚಂಡೀಗಢ, ದೆಹಲಿ, ಗೋವಾ, ಜಮ್ಮು ಮತ್ತು ಕಾಶ್ಮೀರ ಮತ್ತು ನಾಗಾಲ್ಯಾಂಡ್ ನ್ನು ಸಂಪೂರ್ಣವಾಗಿ ಲಾಕ್ ಡೌನ್ ಮಾಡಲಾಗಿದೆ ಎಂದು ಟ್ವಿಟರ್ ನಲ್ಲಿ ತಿಳಿಸಿದೆ. 

57 ವರ್ಷದ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿತ್ತು. ಈ ವ್ಯಕ್ತಿ ಶನಿವಾರ ರಾತ್ರಿ ಮೃತಪಟ್ಟಿದ್ದರು. ಇದರಂತೆ ಪಶ್ಚಿಮಬಂಗಾಳದಲ್ಲಿ ಇದು ವೈರಸ್'ನಿಂದ ಮೊದಲ ಸಾವಾಗಿತ್ತು. ದೇಶದಲ್ಲೆಡೆ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು, ಈಗಾಗಲೇ ಎಲ್ಲಾ ದೇಶೀಯ ವಿಮಾನಗಳ ಹಾರಾಟವನ್ನು ಮಾರ್ಚ್ 24ರ ಮಧ್ಯರಾತ್ರಿಯಿಂದಲೇ ರದ್ದು ಮಾಡಿತ್ತು. 

ಮಹಾರಾಷ್ಟ್ರ ಹಾಗೂ ಕೇರಳದಲ್ಲಿ 97 ಮತ್ತು 95 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಮಹಾರಾಷ್ಟ್ರದಲ್ಲಿ ನಿನ್ನೆಯಷ್ಟೇ ಮೂವರು ವಿದೇಶೀಯರಲ್ಲಿ ವೈರಸ್ ದೃಢಪಟ್ಟಿತ್ತು. ಇನ್ನು ಕರ್ನಾಟಕದಲ್ಲಿ 99 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ 26 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. 

ಈ ಹಿನ್ನೆಲೆಯಲ್ಲಿ ಕೇರಳ, ತಮಿಳುನಾಡು, ಪಾಂಡಿಚೆರಿ, ಹರಿಯಾಣ, ಪಂಜಾಬ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.