ಜಮ್ಮು-ಕಾಶ್ಮೀರ: 7 ತಿಂಗಳ ಗೃಹ ಬಂಧನದ ಬಳಿಕ ಒಮರ್ ಅಬ್ದುಲ್ಲಾ ಬಿಡುಗಡೆ
ಸಂವಿಧಾನದ 370ನೇ ವಿಧಿ ರದ್ಧತಿ ಬಳಿಕ ಗೃಹ ಬಂಧನಕ್ಕೊಳಗಾಗಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು 7 ತಿಂಗಳ ಬಳಿಕ ಮಂಗಳವಾರ ಬಿಡುಗಡೆಗೊಂಡಿದ್ದಾರೆ.

ಜಮ್ಮು: ಸಂವಿಧಾನದ 370ನೇ ವಿಧಿ ರದ್ಧತಿ ಬಳಿಕ ಗೃಹ ಬಂಧನಕ್ಕೊಳಗಾಗಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು 7 ತಿಂಗಳ ಬಳಿಕ ಮಂಗಳವಾರ ಬಿಡುಗಡೆಗೊಂಡಿದ್ದಾರೆ.
2019 ಆಗಸ್ಟ್ 5 ರಂದು 370 ವಿಧಿ ರದ್ದುಗೊಳ್ಳುತ್ತಿದ್ದಂತೆಯೇ ಒಮರ್ ವಿರುದ್ಧ ಸಾರ್ವಜನಿಕ ಭದ್ರತಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಸತತ 7 ತಿಂಗಳ ಕಾಲ ಒಮರ್ ಅಬ್ದುಲ್ಲಾ ಅವರು ಗೃಹ ಬಂಧನದಲ್ಲಿದ್ದರು.
ಒಮರ್ ಅಬ್ದುಲ್ಲಾ ಅವರ ಗೃಹ ಬಂಧನ ಪ್ರಶ್ನಿಸಿ ಸಾರಾ ಅಬ್ದುಲ್ಲಾ ಪೈಲಟ್ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು.
ಸಹೋದರನ ಬಂಧನವು ವಾಕ್ ಸ್ವಾತಂತ್ರ್ಯ ಸೇರಿದಂತೆ ಸಾಂವಿದಾನಿಕ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ. ಇದು ಎಲ್ಲಾ ರಾಜಕೀಯ ಪ್ರತಿಸ್ಪರ್ಧಿಗಳನ್ನು ನಿಯಂತ್ರಿಸುವ ಸ್ಥಿರ ಮತ್ತು ಸಂಘಟಿತ ಪ್ರಯತ್ನದ ಭಾಗವಾಗಿದೆ ಎಂದು ಹೇಳಿದ್ದರು. ಅಲ್ಲದೆ, ಕೂಡಲೇ ಸಹೋದರನನ್ನು ಬಿಡುಗಡೆ ಮಾಡುವಂತೆ ಸುಪ್ರೀಂಕೋರ್ಟ್'ಗೆ ಮನವಿ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


