ಸೋಶಿಯಲ್ ಡಿಸ್ಟೆನ್ಸಿಂಗ್ ಗೆ ಮಾದರಿಯಾದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ!
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಾ.25 ರಂದು ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸೋಶಿಯಲ್ ಡಿಸ್ಟೆನ್ಸಿಂಗ್ ಗೆ ಮಾದರಿಯಾಗಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಾ.25 ರಂದು ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಸೋಶಿಯಲ್ ಡಿಸ್ಟೆನ್ಸಿಂಗ್ ಗೆ ಮಾದರಿಯಾಗಿದೆ.
7 ಲೋಕ್ ಕಲ್ಯಾಣ್ ಮಾರ್ಗ್ ನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಧಾನಿಯವರ ಸಂಪುಟ ಸಹೋದ್ಯೋಗಿಗಳು ಅಂತರ ಕಾಯ್ದುಕೊಂಡು ಕುಳಿತಿದ್ದಾರೆ. ಇದು ಕೊರೋನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾಮಾನ್ಯ ಜನತೆಗೆ ಮಾದರಿಯಾಗಿದೆ.
ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ 600 ಸಮೀಪಿಸಿದ್ದು, ಮಾ.24 ರ ಮಧ್ಯರಾತ್ರಿಯಿಂದ ಪ್ರಧಾನಿ ನರೇಂದ್ರ ಮೋದಿ 21 ದಿನಗಳ ಕಾಲ ದೇಶಾದ್ಯಂತ ಲಾಕ್ ಡೌನ್ ನ್ನು ಘೋಷಿಸಿದ್ದಾರೆ.
ಸುಳ್ಳು ಸುದ್ದಿ, ವದಂತಿ ಹಬ್ಬಿಸುವವರ ಮೇಲೆ ನಿಗಾ ಇಡಲು ರಾಜ್ಯಗಳಿಗೆ ಸೂಚನೆ
ಇದೇ ವೇಳೆ ಲಾಕ್ ಡೌನ್ ಹಿನ್ನೆಲೆಯಲ್ಲಿ ಕೊರೋನಾಗೆ ಸಂಬಂಧಿಸಿದಂತೆ, ಆಹಾರ, ಅಗತ್ಯ ಸೇವೆಗಳಿಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿ, ವದಂತಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇಡಲು ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ಸೂಚನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


