ಕೊರೋನಾ ವೈರಸ್: ದೇಶಾದ್ಯಂತ ಲಾಕ್ ಡೌನ್ ಹಿನ್ನಲೆ, ರಾಷ್ಟ್ರೀಯ ಹೆದ್ದಾರಿ ಟೋಲ್ ಸಂಗ್ರಹ ತಾತ್ಕಾಲಿಕ ರದ್ದುಗೊಳಿಸಿದ ಕೇಂದ್ರ ಸರ್ಕಾರ
ಕೊರೋನಾ ವೈರಸ್ ಪ್ರಸರಣ ತಪ್ಪಿಸುವ ಉದ್ದೇಶದಿಂದ ದೇಶಾದ್ಯಂತ ಹೇರಲಾಗಿರುವ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಟೋಲ್ ಸಂಗ್ರಹ ರದ್ದು ಮಾಡಿದೆ.

ನವದೆಹಲಿ: ಕೊರೋನಾ ವೈರಸ್ ಪ್ರಸರಣ ತಪ್ಪಿಸುವ ಉದ್ದೇಶದಿಂದ ದೇಶಾದ್ಯಂತ ಹೇರಲಾಗಿರುವ ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಟೋಲ್ ಸಂಗ್ರಹ ರದ್ದು ಮಾಡಿದೆ.
ಈ ಕುರಿತಂತೆ ಸ್ವತಃ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಟ್ವೀಟ್ ಮಾಡಿದ್ದು, ದೇಶದ ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ಶುಲ್ಕ ಸಂಗ್ರಹಣೆಯನ್ನು ಬುಧವಾರ ರಾತ್ರಿಯಿಂದಲೇ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ರದ್ದು ಮಾಡಿದೆ ಎಂದು ಹೇಳಿದ್ದಾರೆ.
'ಕೊರೋನಾ ವೈರಸ್ ಭೀತಿ ಇರುವ ಈ ಸಂದರ್ಭದಲ್ಲಿ ಅಗತ್ಯ ಸೇವೆಗಳು ತುರ್ತಾಗಿ ಲಭ್ಯವಾಗಬೇಕೆಂಬ ಉದ್ದೇಶಕ್ಕೆ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಕೋವಿಡ್ 19 ಹಿನ್ನೆಲೆಯಲ್ಲಿ ದೇಶದ ಟೋಲ್ ಪ್ಲಾಜಾಗಳಲ್ಲಿ ಟೋಲ್ ಸಂಗ್ರಹವನ್ನು ತಾತ್ಕಾಲಿಕವಾಗಿ ಸರ್ಕಾರ ನಿರ್ಬಂಧಿಸಿದೆ, ತುರ್ತು ಸೇವೆಗಳಿಗಿರುವ ತೊಡಕು ನಿವಾರಿಸಲಷ್ಟೇ ಈ ನಿರ್ಧಾರ ಕೈಗೊಂಡಿಲ್ಲ. ಬದಲಿಗೆ ಸಮಯ ಉಳಿಸುವ ಸಲುವಾಗಿಯೂ ಈ ತೀರ್ಮಾನ ಮಾಡಲಾಗಿದೆ ಎಂದು ಗಡ್ಕರಿ ಹೇಳಿದ್ದಾರೆ.
ಅಂತೆಯೇ ರಸ್ತೆಗಳ ನಿರ್ವಹಣೆ ಮತ್ತು ಹೆದ್ದಾರಿ ತುರ್ತು ಸೇವೆಗಳು ಎಂದಿನಂತೇ ಲಭ್ಯವಾಗಲಿವೆ ಎಂದೂ ಗಡ್ಕರಿ ಅವರು ಸ್ಪಷ್ಟಪಡಿಸಿದ್ದಾರೆ.
Related Article
ಭಾರತ ಲಾಕ್ ಡೌನ್; ಏಪ್ರಿಲ್ 14ರವರೆಗೂ ರೈಲುಗಳ ಸೇವೆ ಇಲ್ಲ
ಕೊರೋನಾ ವೈರಸ್: ಗುಜರಾತ್ ನಲ್ಲಿ ಸೌದಿಯಿಂದ ವಾಪಸ್ ಆಗಿದ್ದ ಮಹಿಳೆ ಸಾವು, ಭಾರತದಲ್ಲಿ 15ಕ್ಕೇರಿದ ಸಾವಿನ ಸಂಖ್ಯೆ
ಜಗತ್ತಿನಾದ್ಯಂತ ಮಹಾಮಾರಿ ಕೊರೋನಾಗೆ 20,519 ಬಲಿ, ಲಾಕ್ ಡೌನ್ ನಡುವೆಯೂ ಭಾರತದಲ್ಲಿ 12 ಸಾವು!
ಮಹಾಭಾರತ ಯುದ್ಧ ಗೆಲ್ಲಲು 18 ದಿನ, ಕೊರೋನಾ ಗೆಲ್ಲಲು 21 ದಿನ: ಪ್ರಧಾನಿ ಮೋದಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


