ದೇಶದಲ್ಲಿ ಕೊರೋನಾ ರುದ್ರತಾಂಡವ: 19 ಮಂದಿ ಬಲಿ, ಒಂದೇ ದಿನ 149 ಹೊಸ ಪ್ರಕರಣ, 850ಕ್ಕೇರಿದ ಸೋಂಕಿತ ಸಂಖ್ಯೆ
ಕೊರೋನಾ ನಿಗ್ರಹಕ್ಕೆ ಕೇಂದ್ರ ಸರ್ಕಾರ ದೇಶವ್ಯಾಪಿ 21 ದಿನಗಳ ಲಾಕ್ ಡೌನ್ ಘೋಷಿಸಿರುವ ನಡುವೆಯೇ ಶುಕ್ರವಾರ ಒಂದೇ ದಿನ 149ಕ್ಕೂ ಹೆಚ್ಚು ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, ಈ ವರೆಗೂ ವೈರಸ್'ಗೆ 19 ಮಂದಿ ಬಲಿಯಾಗಿದ್ದಾರೆ.

ನವದೆಹಲಿ: ಕೊರೋನಾ ನಿಗ್ರಹಕ್ಕೆ ಕೇಂದ್ರ ಸರ್ಕಾರ ದೇಶವ್ಯಾಪಿ 21 ದಿನಗಳ ಲಾಕ್ ಡೌನ್ ಘೋಷಿಸಿರುವ ನಡುವೆಯೇ ಶುಕ್ರವಾರ ಒಂದೇ ದಿನ 149ಕ್ಕೂ ಹೆಚ್ಚು ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, ಈ ವರೆಗೂ ವೈರಸ್'ಗೆ 19 ಮಂದಿ ಬಲಿಯಾಗಿದ್ದಾರೆ.
ದೇಶದಲ್ಲಿ ಕೊರೋನಾ ಪತ್ತೆಯಾದ ಬಳಿಕ ಒಂದೇ ದಿನ ಇಷ್ಟು ದೊಡ್ಡ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿದ್ದು ಇದೇ ಮೊದಲು ಎಂದು ಹೇಳಲಾಗುತ್ತಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 850ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.
ಈ ನಡುವೆ ಕರ್ನಾಟಕದ ತುಮಕೂರಿನಲ್ಲಿ ಓರ್ವನ ಸಾವಿನೊಂದಿಗೆ ದೇಶದಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 19ಕ್ಕೆ ತಲುಪಿದೆ.
ಶುಕ್ರವಾರ ಕೇರಳ, ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಪ್ರಮಾಣದಲ್ಲಿ ಹೊಸ ಸೋಂಕು ಪತ್ತೆಯಾಗಿದೆ.
ಈ ನಡುವೆ ದೇಶದಲ್ಲಿ ಇನ್ನೂ ಸಾಮುದಾಯಿಕ ಸೋಂಕು ಹರಡುವಿಕೆಯ ಯಾವುದೇ ಪ್ರಕರಣ ಬೆಳಕಿಗೆ ಬಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಈ ನಡುವೆ ಆಘಾತಕಾರಿ ಬೆಳವಣಿಗೆಯೆಂಬಂತೆ ಬ್ರಿಟೀಷ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ ಅವರಲ್ಲೂ ಕೊರೋನಾ ವೈರಸ್ ದೃಢಪಟ್ಟಿದ್ದು, ವೈರಸ್ ಲಕ್ಷಣಗಳು ಕಾಣಿಸಿಕೊಳ್ಳುತ್ತಿದ್ದು, ಪ್ರತ್ಯೇಕ ಕೊಠಡಿಯಲ್ಲಿರುವುದಾಗಿ ಜಾನ್ಸನ್ ಅವರೇ ಹೇಳಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


