ಕೋವಿಡ್- 19: ಕಳೆದ 24 ಗಂಟೆಗಳ ಅವಧಿಯಲ್ಲಿ ಆರು ಸಾವು, 106 ಹೊಸ ಪ್ರಕರಣಗಳು- ಕೇಂದ್ರ ಆರೋಗ್ಯ ಸಚಿವಾಲಯ
ಕೋವಿಡ್ -19 ಸೋಂಕಿನಿಂದ ಕಳೆದ 24 ಗಂಟೆಗಳ ಅವಧಿಯಲ್ಲಿ ಆರು ರಾಜ್ಯಗಳಲ್ಲಿ ಆರು ಸಾವಿನ ಪ್ರಕರಣಗಳು ವರದಿಯಾಗಿದ್ದು, 106 ಮಂದಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ

ನವದೆಹಲಿ: ಕೋವಿಡ್ -19 ಸೋಂಕಿನಿಂದ ಕಳೆದ 24 ಗಂಟೆಗಳ ಅವಧಿಯಲ್ಲಿ ಆರು ರಾಜ್ಯಗಳಲ್ಲಿ ಆರು ಸಾವಿನ ಪ್ರಕರಣಗಳು ವರದಿಯಾಗಿದ್ದು, 106 ಮಂದಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ
ಈವರೆಗೂ 25 ಸಾವಿನ ಪ್ರಕರಣಗಳು ಸೇರಿದಂತೆ ದೇಶದಲ್ಲಿ 1070 ಹೊಸ ಪ್ರಕರಣಗಳು ದೃಢಪಟ್ಟಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ ವಾಲ್ ತಿಳಿಸಿದ್ದಾರೆ.
ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಭಾನುವಾರದವರೆಗೂ 34 ಸಾವಿರದ 931 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ರಾಮನ್ ರಾಮನ್ ಗಂಗಖೇಡ್ಕರ್ ಹೇಳಿದ್ದಾರೆ.
ಪ್ರಯೋಗಾಲಯಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. 113 ಪ್ರಯೋಗಾಲಯಗಳು ಕಾರ್ಯನಿರ್ವಹಿಸುತ್ತಿವೆ. ಕೋವಿಡ್-19 ಪರೀಕ್ಷೆ ನಡೆಸಲು 47 ಖಾಸಗಿ ಪ್ರಯೋಗಾಲಯಗಳಿಗೂ ಅನುಮತಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಲಾಕ್ ಡಾನ್ ವೇಳೆಯಲ್ಲಿ ಪ್ರಯೋಗಾಲಯಗಳಲ್ಲಿ ಕೆಲಸ ಮಾಡುವವರಿಗೆ ಉದ್ಯೋಗದಾತರು ಯಾವುದೇ ರೀತಿಯ ಕಡಿತ ಮಾಡದೆ ಪೂರ್ಣ ಪ್ರಮಾಣದ ಸಂಬಳ ನೀಡಬೇಕು, ಈ ಅವಧಿಯಲ್ಲಿ ಮನೆ ಮಾಲೀಕರು ಬಾಡಿಗೆ ಪಡೆಯುವಂತಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಜಂಟಿ ಕಾರ್ಯದರ್ಶಿ ಪುಣ್ಯ ಸಲೀಲಾ ಶ್ರೀವಾಸ್ತವ ಸೂಚನೆ ನೀಡಿದ್ದಾರೆ.
21 ದಿನಗಳ ಲಾಕ್ ಡೌನ್ ಸಂದರ್ಭದಲ್ಲಿ ಉಂಟಾಗುವ ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಲಹೆ ನೀಡಲು 08046110007 ಸಹಾಯವಾಣಿಯನ್ನು ನಿಮ್ಹಾನ್ಸ್ ತೆರೆದಿದೆ ಎಂದು ಅಗರ್ ವಾಲ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


