ಭಾರತದಲ್ಲಿ ಕೊರೋನಾ ಸೋಂಕು ಸಮುದಾಯ ಪ್ರಸರಣ ಹಂತ ತಲುಪಿದೆ:ಆತಂಕ ತಂದಿದೆ ಅಧಿಕಾರಿಯೊಬ್ಬರ ಹೇಳಿಕೆ
21 ದಿನಗಳ ಲಾಕ್ ಡೌನ್ ನೀಡಿ ಮುನ್ನೆಚ್ಚರಿಕೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಘೋಷಿಸಿದರೂ ಕೂಡ ಭಾರತದಲ್ಲಿ ಕೊರೋನಾ ಸೋಂಕು ಮೂರನೇ ಅಥವಾ ಸಮುದಾಯ ಹರಡುವಿಕೆ ಹಂತಕ್ಕೆ ತಲುಪಿದೆ ಎಂದು ಅಧಿಕೃತ ಮೂಲಗಳಿಂದ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಮಾಹಿತಿ ಸಿಕ್ಕಿದೆ.

ನವದೆಹಲಿ: 21 ದಿನಗಳ ಲಾಕ್ ಡೌನ್ ನೀಡಿ ಮುನ್ನೆಚ್ಚರಿಕೆಯನ್ನು ಕೇಂದ್ರ ಸರ್ಕಾರ ಘೋಷಿಸಿದರೂ ಕೂಡ ಭಾರತದಲ್ಲಿ ಕೊರೋನಾ ಸೋಂಕು ಮೂರನೇ ಅಥವಾ ಸಮುದಾಯ ಪಸರಿಸುವಿಕೆ ಹಂತಕ್ಕೆ ತಲುಪಿದೆ ಎಂದು ಅಧಿಕೃತ ಮೂಲಗಳಿಂದ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಮಾಹಿತಿ ಸಿಕ್ಕಿದೆ.
ವಿದೇಶಗಳಿಂದ ಬಂದ ಅಥವಾ ವಿದೇಶಗಳಿಂದ ಬಂದ ಜನರೊಂದಿಗೆ ಸಂಪರ್ಕ ಹೊಂದಿಲ್ಲದವರಿಗೆ ಕೊರೋನಾ ವೈರಸ್ ತಗುಲಿರುವ ಮೂರು ಪ್ರಕರಣಗಳು ವರದಿಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಮುದಾಯಗಳಲ್ಲಿ ಪತ್ತೆಯಾದ ಈ ಮೂರೂ ಕೇಸುಗಳು ಅತಿ ಜನಸಂಖ್ಯೆ ಇರುವ ಪ್ರದೇಶಗಳಲ್ಲಾಗಿದ್ದು ಕೊರೋನಾ ಯಾವ ಪ್ರಮಾಣದಲ್ಲಿ ಇಲ್ಲಿ ಹಬ್ಬುತ್ತಿದೆ, ಯಾವ ತೀವ್ರತೆಯಲ್ಲಿದೆ ಎಂದು ಎಲ್ಲಾ ಅಂಕಿಅಂಶಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡಲಾಗುತ್ತಿದೆ. ಸಮುದಾಯಗಳಿಗೆ ಹಬ್ಬುವುದನ್ನು ತಡೆಗಟ್ಟಲು ಸಾಧ್ಯವಾಗುತ್ತಿಲ್ಲ, ಇದೇ ಪ್ರಮಾಣದಲ್ಲಿ ಹಬ್ಬಿದರೆ ಅದು ಯಾವ ಹಂತಕ್ಕೆ ಹೋಗಬಹುದು ಎಂದು ಊಹಿಸಲು ಅಸಾಧ್ಯ ಎಂದು ಅಧಿಕಾರಿ ಹೇಳುತ್ತಾರೆ.
ನಿನ್ನೆ ಒಂದೇ ದಿನದಲ್ಲಿ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ಭಾರತದಲ್ಲಿ ಸದ್ಯ 918 ಮಂದಿ ಸೋಂಕಿತರಿದ್ದಾರೆ. ಮೊನ್ನೆ ಶುಕ್ರವಾರ ಬೆಳಗಿನ ಹೊತ್ತಿಗೆ ಸೋಂಕಿತರ ಸಂಖ್ಯೆ 724 ಆಗಿತ್ತು.ಸಮುದಾಯಗಳಲ್ಲಿ ಕೊರೋನಾ ಪಸರಿಸಿರುವುದು ಪತ್ತೆಯಾದ ನಂತರ ಇದೀಗ ಯಾವುದೇ ವ್ಯಕ್ತಿ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರೆ ಅಂತವರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಬೇಕೆಂದು ಹೇಳಲಾಗುತ್ತಿದೆ. ಅಲ್ಲದೆ ಇತ್ತೀಚೆಗೆ ವಿದೇಶಗಳಿಂದ ಬಂದವರನ್ನು, ಅವರ ಜೊತೆ ನಿಕಟ ಸಂಪರ್ಕ ಹೊಂದಿದ್ದವರಲ್ಲಿ ಸಹ ಕೊರೋನಾ ಸೋಂಕು ಲಕ್ಷಣ ಕಾಣಿಸಿಕೊಂಡು ಪರೀಕ್ಷೆಗೊಳಪಡಿಸಲಾಗುತ್ತಿದೆ ಮತ್ತು ಆರೋಗ್ಯ ವಲಯಗಳಲ್ಲಿ ಕೆಲಸ ಮಾಡುವವರಲ್ಲಿ ಕೂಡ ಕಾಣಿಸಿಕೊಳ್ಳುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


