ಅಂತ್ಯಸಂಸ್ಕಾರಕ್ಕೆ ಬಾರದ ಕುಟುಂಬಸ್ಥರು: ಕೊರೋನಾ ಪೀಡಿತನ ಅಂತ್ಯಕ್ರಿಯೆ ನೆರವೇರಿಸಿದ ಹೆಲ್ತ್ ವರ್ಕರ್ಸ್
ತೆಲಂಗಾಣ ರಾಜಧಾನಿ ಹೈದರಾಬಾದ್‌ನಲ್ಲಿ ಕೊರೊನಾ ವೈರಸ್ ಪೀಡಿತ ವೃದ್ಧನೋರ್ವ ಮೃತಪಟ್ಟಿದ್ದು, ಕುಟುಂಬ ಮತ್ತು ಆಪ್ತರ ಅನುಪಸ್ಥಿತಿಯಲ್ಲಿ ಆರೋಗ್ಯ ಸೇವಾ ಕಾರ್ಯಕರ್ತರೇ ಶವಸಂಸ್ಕಾರ ನಡೆಸಿದ ಘಟನೆ ನಡೆದಿದೆ.

ಹೈದರಾಬಾದ್: ತೆಲಂಗಾಣ ರಾಜಧಾನಿ ಹೈದರಾಬಾದ್‌ನಲ್ಲಿ ಕೊರೊನಾ ವೈರಸ್ ಪೀಡಿತ ವೃದ್ಧನೋರ್ವ ಮೃತಪಟ್ಟಿದ್ದು, ಕುಟುಂಬ ಮತ್ತು ಆಪ್ತರ ಅನುಪಸ್ಥಿತಿಯಲ್ಲಿ ಆರೋಗ್ಯ ಸೇವಾ ಕಾರ್ಯಕರ್ತರೇ ಶವಸಂಸ್ಕಾರ ನಡೆಸಿದ ಘಟನೆ ನಡೆದಿದೆ.
ಕೊರೊನಾ ವೈರಸ್‌ನಿಂದ ಮೃತಪಟ್ಟ 74 ವರ್ಷದ ವೃದ್ಧನ ಇಡೀ ಕುಟುಂಬ ಗೃಹ ಬಂಧನದಲ್ಲಿದ್ದು, ಪರಿಣಾಮವಾಗಿ ಅವರು ಶವಸಂಸ್ಕಾರದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ.
ತೆಲಂಗಾಣದಲ್ಲಿ ಕೊರೊನಾ ವೈರಸ್‌ನಿಂದ ಮೃತಪಟ್ಟ ಮೊದಲ ಪ್ರಕರಣ ಇದಾಗಿದ್ದು, ವೃದ್ಧ ಸಾವನ್ನಪ್ಪಿದ ಬಳಿಕ ಆತನಿಗೆ ಕೊರೊನಾ ವೈರಸ್ ಇರುವುದು ಪತ್ತೆಯಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮೃತ ವೃದ್ಧನ ಕುಟುಂಬಸ್ಥರು ಹಾಗೂ ಆಪ್ತರ ಅನುಪಸ್ಥಿತಿಯಲ್ಲಿ ಆರೋಗ್ಯ ಸೇವಾ ಕಾರ್ಯಕರ್ತರೇ ನೆರವೇರಿಸಿದ್ದಾರೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಮೃತ ವ್ಯಕ್ತಿಯ ಶವಸಂಸ್ಕಾರದಲ್ಲಿ 20ಕ್ಕಿಂತ ಹೆಚ್ಚಿನ ಜನ ಭಾಗವಹಿಸುವಂತಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


