ಏಪ್ರಿಲ್ 7 ರೊಳಗೆ ತೆಲಂಗಾಣ ಕೊರೋನಾ ಮುಕ್ತವಾಗುತ್ತದೆ: ಕೆಸಿ ಚಂದ್ರಶೇಖರ್ ರಾವ್
ರಾಜ್ಯದಲ್ಲಿ 70 ಕೊರೊನಾವೈರಸ್ ಸಕಾರಾತ್ಮಕ ಪ್ರಕರಣಗಳು ವರದಿಯಾಗಿದ್ದು, 11 ಗುಣಪಡಿಸಲಾಗಿದೆ ಮತ್ತು ಋಣಾತ್ಮಕ ಪರೀಕ್ಷೆ ಮಾಡಲಾಗಿದೆ. ಕಾರೋನಾವೈರಸ್ ನೆಗೆಟಿವ್ ಬಂದಿರುವವರನ್ನು ಸೋಮವಾರ ಡಿಸ್ಚಾರ್ಜ್ ಮಾಡಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹೇಳಿದ್ದಾರೆ.

ಹೈದರಾಬಾದ್: ರಾಜ್ಯದಲ್ಲಿ 70 ಕೊರೊನಾವೈರಸ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಅದರಲ್ಲಿ 11 ಗುಣಪಡಿಸಲಾಗಿದೆ. ಕೊರೋನಾ ವೈರಸ್ ನೆಗೆಟಿವ್ ಬಂದಿರುವವರನ್ನು ಸೋಮವಾರ ಡಿಸ್ಚಾರ್ಜ್ ಮಾಡಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾವ್, "ಅಗತ್ಯವಿರುವ ಎಲ್ಲಾ ಪರೀಕ್ಷೆಗಳನ್ನು ಮುಗಿಸಿ, ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
"ಇತರ ದೇಶಗಳಿಂದ ಬಂದ 25,937 ಜನರು ಸರ್ಕಾರದ ನಿಗಾದಲ್ಲಿದ್ದಾರೆ. ಈ ಜನರ ಕ್ವಾರಂಟೈನ್ ಏಪ್ರಿಲ್ 7 ರಂದು ಪೂರ್ಣಗೊಳ್ಳಲಿದೆ" ಎಂದು ಅವರು ಇದೇ ವೇಳೆ ತಿಳಿಸಿದರು.
ನಾಗರಿಕರಿಗೆ ತೊಂದರೆಯಾಗದಂತೆ ರೈತರಿಂದ ಹಣ್ಣು ತರಕಾರಿ ಖರೀದಿಸಿ ನಗದರಲ್ಲಿ ಮಾರಾಟ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ ಅವರು ಹಣ್ಣುಗಳನ್ನು ಖರೀದಿಸಿಲು 500 ಕೇಂದ್ರಗಳನ್ನು ತೆರೆಯಲಾಗುವುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


