ಹುಸಿಯಾದ ಭರವಸೆ?: ಮಹಾರಾಷ್ಟ್ರದಲ್ಲಿ ಪ್ಲಾಸ್ಮಾ ಚಿಕಿತ್ಸೆ ಪಡೆದ ಸೋಂಕಿತ ವ್ಯಕ್ತಿ ಸಾವು!
ಕೊರೋನಾ ಚಿಕಿತ್ಸೆಗೆ ರಾಮಬಾಣವೆಂದೇ ಹೇಳಲಾಗುತ್ತಿದ್ದ ಪ್ಲಾಸ್ಮಾ ಥೆರಪಿ ಇದೀಗ ಭರವಸೆಯನ್ನು ಹುಸಿಯಾಗಿಸುತ್ತಿದೆಯೇ ಎಂಬ ಅನುಮಾನಗಳನ್ನು ಮೂಡಿಸುತ್ತಿದೆ. ಕೊರೋನಾ ಸೋಂಕಿತರ ಜೀವ ಉಳಿಸಲು ಹಲವು ರಾಜ್ಯಗಳು ಪ್ಲಾಸ್ಮಾ ಥೆರಪಿ ಮಾಡಲು ತುದಿಗಾಲಿನಲ್ಲಿ ನಿಂತಿರುವಾಗಲೇ ಮಹಾರಾಷ್ಟ್ರದಲ್ಲಿ ಪ್ಲಾಸ್ಮಾ ಚಿಕಿತ್ಸೆ ಪಡೆದ ಮೊದಲ ವ್ಯಕ್ತಿ ಮೃತಪಟ್ಟಿದ್ದಾರೆ.

ಮುಂಬೈ: ಕೊರೋನಾ ಚಿಕಿತ್ಸೆಗೆ ರಾಮಬಾಣವೆಂದೇ ಹೇಳಲಾಗುತ್ತಿದ್ದ ಪ್ಲಾಸ್ಮಾ ಥೆರಪಿ ಇದೀಗ ಭರವಸೆಯನ್ನು ಹುಸಿಯಾಗಿಸುತ್ತಿದೆಯೇ ಎಂಬ ಅನುಮಾನಗಳನ್ನು ಮೂಡಿಸುತ್ತಿದೆ. ಕೊರೋನಾ ಸೋಂಕಿತರ ಜೀವ ಉಳಿಸಲು ಹಲವು ರಾಜ್ಯಗಳು ಪ್ಲಾಸ್ಮಾ ಥೆರಪಿ ಮಾಡಲು ತುದಿಗಾಲಿನಲ್ಲಿ ನಿಂತಿರುವಾಗಲೇ ಮಹಾರಾಷ್ಟ್ರದಲ್ಲಿ ಪ್ಲಾಸ್ಮಾ ಚಿಕಿತ್ಸೆ ಪಡೆದ ಮೊದಲ ವ್ಯಕ್ತಿ ಮೃತಪಟ್ಟಿದ್ದಾರೆ.
ಕೊರೋನಾಗೆ ದೇಶದಲ್ಲೇ ಇದೇ ಮೊದಲ ಬಾರಿಗೆ ಪ್ಲಾಸ್ಮಾ ಚಿಕಿತ್ಸೆ ಪಡೆದು ದೆಹಲಿಯ ರೋಗಿಯೊಬ್ಬರು ಗುಣಮುಖರಾದ ಬೆನ್ನಲೇ, ಮೊದಲ ಸಾವಿನ ಸುದ್ದಿಯೂ ಬಂದಿದೆ.
ಕೊರೋನಾಗೆ ಪ್ಲಾಸ್ಮಾ ಚಿಕಿತ್ಸೆ ಅಂಗೀಕೃತವಲ್ಲ, ಅದನ್ನು ಸರಿಯಾದ ವಿಧಾನದಲ್ಲಿ ನಡೆಸದಿದ್ದರೆ ಸಾವೂ ಸಂಭವಿಸಬಹುದು ಎಂದು ಕೇಂದ್ರ ಸರ್ಕಾರ ಈ ಹಿಂದೆ ಎಚ್ಚರಿಕೆ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ಈ ಘಟನೆ ನಡೆದಿದೆ.
ಏ.20ರಂದು ಲೀಲಾವತಿ ಆಸ್ಪತ್ರೆಗೆ ದಾಖಲಾದ 53 ವರ್ಷದ ವ್ಯಕ್ತಿಗೆ ಏ.25ರಿಂದ ಪ್ಲಾಸ್ಮಾ ಚಿಕಿತ್ಸೆ ನೀಡಲಾಗುತ್ತಿತ್ತು. ಆರಂಭದಲ್ಲಿ ಆರೋಗ್ಯ ಸುಧಾರಿಸಿದಂತೆ ಕಾಣಿಸಿದರೂ ನಂತರ ತೀವ್ರ ಉಸಿರಾಟದ ತೊಂದರೆಯಿಂದಾಗಿ ರೋಗಿ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಮೃತ ರೋಗಿಗೆ ಕೊರೋನಾದಿಂದ ಗುಣಮುಖರಾದ ವ್ಯಕ್ತಿಯ 200 ಎಂಎಲ್ ಪ್ಲಾಸ್ಮಾವನ್ನು ಏ.25 ರಂದು ನೀಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


