ಭಾರತೀಯರು ಮುಸ್ಲಿಂ ವಿರೋಧಿಗಳು ಎಂದು ಅರಬರಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ:ವಿದೇಶಾಂಗ ಇಲಾಖೆ
ಕೊರೋನಾ ವೈರಸ್ ತಡೆಗಟ್ಟಲು ಭಾರತ ದೇಶದ ಹಲವು ಭಾಗಗಳಲ್ಲಿ ಮುಸಲ್ಮಾನರ ವಿರುದ್ಧ ಕಿರುಕುಳ ನೀಡಲಾಗುತ್ತದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಅರಬ್ ದೇಶ ಸುಳ್ಳು ಪ್ರಚಾರ ಮಾಡುತ್ತಿದೆ ಎಂದು ಭಾರತ ಪ್ರತಿಪಾದಿಸಿದೆ.

ನವದೆಹಲಿ: ಕೊರೋನಾ ವೈರಸ್ ತಡೆಗಟ್ಟಲು ಭಾರತ ದೇಶದ ಹಲವು ಭಾಗಗಳಲ್ಲಿ ಮುಸಲ್ಮಾನರ ವಿರುದ್ಧ ಕಿರುಕುಳ ನೀಡಲಾಗುತ್ತದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಅರಬ್ ದೇಶ ಸುಳ್ಳು ಪ್ರಚಾರ ಮಾಡುತ್ತಿದೆ ಎಂದು ಭಾರತ ಪ್ರತಿಪಾದಿಸಿದೆ.
ಈ ಆರೋಪವನ್ನು ಸ್ಪಷ್ಟವಾಗಿ ಅಲ್ಲಗಳೆದಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ಅನುರಾಗ್ ಶ್ರೀವಾಸ್ತವ್, ಗಲ್ಫ್ ರಾಷ್ಟ್ರಗಳ ಜೊತೆ ಭಾರತ ಉತ್ತಮ ಬಾಂಧವ್ಯ ಇರಿಸಿಕೊಳ್ಳಲು ಬದ್ಧವಾಗಿದ್ದು ಕೋವಿಡ್-19 ನಂತರ ಕೈಗೊಳ್ಳಬೇಕಾದ ಆರ್ಥಿಕ ಪುನಶ್ಚೇತನಕ್ಕೆ ಗಲ್ಫ್ ರಾಷ್ಟ್ರಗಳ ಜೊತೆ ಮಾತುಕತೆಗೆ ಸಹ ಸಿದ್ದ ಎಂದು ಹೇಳಿದ್ದಾರೆ.
ಗಲ್ಫ್ ರಾಷ್ಟ್ರಗಳೊಂದಿಗಿನ ಆಳವಾದ ಉತ್ತಮ ಬಾಂಧವ್ಯ ಇರುವುದರಿಂದಾಗಿಯೇ ರಂಜಾನ್ ಸಮಯದಲ್ಲಿ ಅಲ್ಲಿಗೆ ಅಗತ್ಯ ಆಹಾರ ವಸ್ತುಗಳನ್ನು ಭಾರತ ಪೂರೈಸುತ್ತಿದೆ ಎಂದು ಅವರು ಹೇಳಿದ್ದಾರೆ.
ಇದು ಪಟ್ಟಭದ್ರ ಹಿತಾಸಕ್ತಿಗಳ ಅಪಪ್ರಚಾರ. ಇಂತಹ ಸುಳ್ಳು ಟ್ವೀಟ್ ಗಳ ಮೂಲಕ ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಹಾಳು ಮಾಡಲು ಸಾಧ್ಯವಿಲ್ಲ. ನಮ್ಮ ಸಂಬಂಧದ ವಾಸ್ತವ ಚಿತ್ರಣ ಬೇರೆಯದ್ದೇ ಇದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


