ಹಂದ್ವಾರದಲ್ಲಿ ಉಗ್ರರ ಅಟ್ಟಹಾಸ: 2 ಸೇನಾಧಿಕಾರಿಗಳು ಸೇರಿ 5 ಯೋಧರು ಹುತಾತ್ಮ, 2 ಉಗ್ರರು ಹತ
ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ದಾಳಿಯಲ್ಲಿ ಇಬ್ಬರು ಸೇನಾಧಿಕಾರಿಗಳು ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದಾರೆ. ಉಗ್ರರ ವಿರುದ್ಧ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಭಾನುವಾರ ತಿಳಿದುಬಂದಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ದಾಳಿಯಲ್ಲಿ ಇಬ್ಬರು ಸೇನಾಧಿಕಾರಿಗಳು ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದಾರೆ. ಉಗ್ರರ ವಿರುದ್ಧ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಭಾನುವಾರ ತಿಳಿದುಬಂದಿದೆ.
ಹಂದ್ವಾರದ ಛಾಂಜ್ಮುಲ್ಲಾ ಎಂಬ ಪ್ರದೇಶದಲ್ಲಿ ಉಗ್ರರು ನಾಗರೀಕ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ನುಗ್ಗಿದ್ದು, ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆಂದು ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆಗಿಳಿದಿದ್ದವು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಸೇನಾಧಿಕಾರಿಗಳು ಇಬ್ಬರು ಯೋಧರು ಹಾಗೂ ಜಮ್ಮು ಮತ್ತು ಕಾಶ್ಮೀರದ ಓರ್ವ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದಾರೆಂದು ವರದಿಗಳು ತಿಳಿಸಿವೆ.
ಇದೀಗ ಉಗ್ರರ ಬಳಿ ಒತ್ತೆಯಾಳುಗಳಾಗಿದ್ದ ನಾಗರೀಕರನ್ನು ಭದ್ರತಾಪಡೆಗಳು ಸುರಕ್ಷಿತರಾಗಿ ಕರೆತಂದಿದ್ದು, ಈ ವೇಳೆ ಭಯೋತ್ಪಾದಕರು ನಡೆಸಿದ ದಾಳಿಗೆ ದಿಟ್ಟ ಉತ್ತರ ನೀಡಿ, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


