ಹಂದ್ವಾರ ಎನ್'ಕೌಂಟರ್: ಹುತಾತ್ಮ ವೀರ ಯೋಧರ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ
ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 5 ಯೋಧರು ಹುತಾತ್ಮರಾದ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ತೀವ್ರ ಸಂತಾಪ ಸೂಚಿಸಿದ್ದಾರೆ.

ನವದೆಹಲಿ; ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 5 ಯೋಧರು ಹುತಾತ್ಮರಾದ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ತೀವ್ರ ಸಂತಾಪ ಸೂಚಿಸಿದ್ದಾರೆ.
ಇಂದು ಬೆಳಿಗ್ಗೆ ಹಂದ್ವಾರದಲ್ಲಿ ಉಗ್ರರು ನಾಗರೀಕ ಪ್ರದೇಶವೊಂದರ ಮನೆಯಲ್ಲಿ ಅಡಗಿ ಕುಳಿತು ಜನರನ್ನು ಒತ್ತೆಯಾಳುಗಳನ್ನಾಗಿರಿಸಿಕೊಂಡಿದ್ದರು. ಈ ವೇಳೆ ಸೇನೆ ನಡೆಸಿದ ಕಾರ್ಯಾಚರಣೆ ಇಬ್ಬರು ಸೇನಾಧಿಕಾರಿಗಳು ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದರು.
ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಜನಾಥ್ ಸಿಂಗ್ ಅವರು, ಹಂದ್ವಾರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಮ್ಮ ಯೋಧರು ಹಾಗೂ ಭದ್ರತಾಪಡೆಗಳು ಹುತಾತ್ಮರಾಗಿರುವುದು ಬಹಳಷ್ಟು ನೋವು ತಂದಿದೆ. ಉಗ್ರರ ವಿರುದ್ಧ ಯೋಧರು ದಿಟ್ಟ ಹೋರಾಟ ಮಾಡಿದ್ದಾರೆ. ದೇಶವನ್ನು ರಕ್ಷಣೆ ಮಾಡುವಲ್ಲಿ ತ್ಯಾಗ ಮಾಡಿದ್ದಾರೆ. ಅವರ ತ್ಯಾಗ ಹಾಗೂ ಬಲಿದಾನವನ್ನು ನಾವೆಂದೂ ಮರೆಯುವುದಿಲ್ಲ ಎಂದು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಯೋಧರಿಗೆ ಸಂತಾಪ ಸೂಚಿಸುತ್ತೇನೆ. ಹುತಾತ್ಮ ಯೋಧರ ಕುಟುಂಬಸ್ಥರ ಕುರಿತು ಬಹಳಷ್ಟು ನೋವಾಗುತ್ತಿದೆ. ಹುತಾತ್ಮ ಯೋಧರ ಕುಟುಂಬಗಳೊಂದಿಗೆ ಭಾರತ ಹೆಗಲು ಕೊಟ್ಟು ನಿಲ್ಲಲಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


