ಕೊರೋನಾ ವೈರಸ್: ದೇಶದಲ್ಲಿ 24 ಗಂಟೆಗಳಲ್ಲಿ 2,573 ಹೊಸ ಪಾಸಿಟಿವ್ ಪ್ರಕರಣ, 83 ಸೋಂಕಿತರು ಸಾವು
ಭಾರತದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮತ್ತೆ ಜೋರಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಬರೊಬ್ಬರಿ 2,573 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 42,836ಕ್ಕೆ ಏರಿಕೆಯಾಗಿದೆ.

ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮತ್ತೆ ಜೋರಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಬರೊಬ್ಬರಿ 2,573 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 42,836ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಈ ಬಗ್ಗೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ವಿವಿಧ ರಾಜ್ಯಗಳಿಂದ 2,573 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 42, 836ಕ್ಕೆ ಏರಿಕೆಯಾಗಿದೆ. ಈ ಪೈಕಿ 11,762 ಮಂದಿ ಸೋಂಕಿತರು ಗುಣಮುಖರಾಗಿದ್ದು, 29, 685 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರತದ 20 ಮಹಾ ನಗರಗಳಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಅದರಲ್ಲೂ ಮುಂಬೈ, ಅಹಮದಾಬದ್, ದೆಹಲಿ, ಚೆನ್ನೈ ನಗರಗಳಲ್ಲೇ ಹೆಚ್ಚು ಕೊರೋನಾ ಪೀಡಿತರಿದ್ದಾರೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಒಂದೇ ದಿನದಲ್ಲಿ 83 ಸಾವು, ಸಾವಿನ ಸಂಖ್ಯೆ 1389ಕ್ಕೆ ಏರಿಕೆ
ಇನ್ನು ನಿನ್ನೆ ಒಂದೇ ದಿನ 83 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1389ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


