ಇಂದಿನಿಂದ ಲಾಕ್'ಡೌನ್ 3.0: ಬಹುತೇಕ ಸೇವೆಗಳು ಲಭ್ಯ, ಕಂಟೈನ್ಮೆಂಟ್ ಝೋನ್ ಗಳಲ್ಲಿ ಮಾತ್ರ ಕಟ್ಟುನಿಟ್ಟಿನ ಲಾಕ್ಡೌನ್
ಕೊರೋನಾ ವೈರಸ್ ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರ ಜಾರಿಗೊಳಿಸಿರುವ 14 ದಿನಗಳ ಮೂರನೇ ಲಾಕ್'ಡೌನ್ ಮೇ.4ರಿಂದ ಆರಂಭವಾಗಲಿದೆ. ಇದು ಮೇ.17ರವರೆಗೆ ಜಾರಿಯಲ್ಲಿರಲಿದೆ.

ನವದೆಹಲಿ: ಕೊರೋನಾ ವೈರಸ್ ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರ ಜಾರಿಗೊಳಿಸಿರುವ 14 ದಿನಗಳ ಮೂರನೇ ಲಾಕ್'ಡೌನ್ ಮೇ.4ರಿಂದ ಆರಂಭವಾಗಲಿದೆ. ಇದು ಮೇ.17ರವರೆಗೆ ಜಾರಿಯಲ್ಲಿರಲಿದೆ.
ಈ ಲಾಕ್'ಡೌನ್ ನಲ್ಲಿ ಮೊದಲೆರಡು ಲಾಕ್ಡೌನ್'ಗೆ ಹೋಲಿಕೆ ಮಾಡಿದರೆ ಸಾಕಷ್ಟು ವಿನಾಯಿತಿಗಳನ್ನು ನೀಡಲಾಗಿದೆ. ಕೊರೋನಾ ಪ್ರಕರಣಗಳು ಇರುವ ಕಂಟೈನ್ಮೆಂಟ್ ಝೋನ್ ಗಳಲ್ಲಿ ಮಾತ್ರ ಕಟ್ಟುನಿಟ್ಟಿನ ಲಾಕ್ಡೌನ್ ಇರಲಿದೆ.
ಮಾರ್ಚ್25ರಿಂದ 40ದಿನಗಳ ಕಾಲ ದೇಶದ್ಯಂತ ಜಾರಿಯಲ್ಲಿದ್ದ ಮೊದಲ ಎರಡು ಲಾಕ್'ಡೌನ್ ವೇಳೆ ಅಗತ್ಯ ವಸ್ತು ಹಾಗೂ ಸೇವೆಗಳನ್ನು ಹೊರತುಪಡಿಸಿ ಇನ್ನಾವುದೇ ಸೇವೆಗಳು ಲಭ್ಯವಿರಲಿಲ್ಲ.
ಜನರು ಕಡ್ಡಾಯವಾಗಿ ಮನೆಯಲ್ಲೇ ಇರಬೇಕಾಗಿತ್ತು. ಅದರ ಪರಿಣಾಮವಾಗಿ ದೇಶದಲ್ಲಿ ಕೊರೋನಾ ಸೋಂಕು ಹರಡುವವರೆಗೆ ವೇಗ ಕಡಿಮೆಯಾಗಿದೆ. ಆದರೆ, ಕೆಲ ರಾಜ್ಯಗಳಲ್ಲಿ ಈಗಲೂ ಸೋಂಕು ಹರಡುತ್ತಿದೆ. ಹೀಗಾಗಿ ಮೂರನೇ ಲಾಕ್'ಡೌನ್ ಜಾರಿಗೊಳಿಸಲಾಗಿದ್ದು, ಸೋಂಕು ಇರುವ ಸ್ಥಳಗಳಲ್ಲಿ ಬಹುತೇಕ ಸೇವೆಗಳಿಗೆ ಅನುಮತಿ ನೀಡಲಾಗಿದೆ. ಆದರೆ, ಈ ಲಾಕ್'ಡೌನ್ ವೇಳೆಯಲ್ಲೂ ದೇಶದಾದ್ಯಂತ ಕರ್ಫ್ಯೂ ಜಾರಿಯಲ್ಲಿದ್ದು, ಜನರು ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ಕ್ರಮಕೈಗೊಳ್ಳುವ ಅಧಿಕಾರಿ ಜಿಲ್ಲಾಧಿಕಾರಿಗಳಿಗೆ ಇರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


