ದೇಶ

ಭಾರತಕ್ಕೆ ಕೊರೋನಾಘಾತ: 24 ಗಂಟೆಗಳಲ್ಲಿ 3,900 ಮಂದಿಯಲ್ಲಿ ಸೋಂಕು ಪತ್ತೆ, ಸೋಂಕಿತರ ಸಂಖ್ಯೆ 46,433ಕ್ಕೆ ಏರಿಕೆ

ಭಾರತದಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಕೇವಲ 24 ಗಂಟೆಗಳಲ್ಲಿ 3,900 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಭಾರತಕ್ಕೆ ಕೊರೋನಾಘಾತ: 24 ಗಂಟೆಗಳಲ್ಲಿ 3,900 ಮಂದಿಯಲ್ಲಿ ಸೋಂಕು ಪತ್ತೆ, ಸೋಂಕಿತರ ಸಂಖ್ಯೆ 46,433ಕ್ಕೆ ಏರಿಕೆ
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಕೇವಲ 24 ಗಂಟೆಗಳಲ್ಲಿ 3,900 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 46,433ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. 

ಇನ್ನು 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 195 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂ 1,568ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರ ಒಂದೇ ರಾಜ್ಯದಲ್ಲಿ 14,541 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಗುಜರಾತ್ ನಲ್ಲಿ 5,804 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು 46,433 ಮಂದಿ ಸೋಂಕಿತರ ಪೈಕಿ 12,727 ಗುಣಮುಖರಾಗಿದ್ದು, ಪ್ರಸ್ತುತ ದೇಶದಲ್ಲಿ ಇನ್ನೂ 32,138 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.