ವಿದೇಶಗಳಲ್ಲಿ ಸಿಲುಕಿರುವ ಭಾರತೀಯರ ಕರೆತರಲು 64 ವಿಮಾನ, ಲಂಡನ್-ದೆಹಲಿ ಟಿಕೆಟ್ ಗೆ 50 ಸಾವಿರ
ಕೊರೋನಾ ಮಹಾಮಾರಿ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ವಿದೇಶಗಳಲ್ಲಿ ಸಿಲುಕಿರುವ ಸುಮಾರು 15 ಸಾವಿರ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಮುಂದಾಗಿದ್ದು, ಲಂಡನ್- ದೆಹಲಿ ಪ್ರಯಾಣಕ್ಕೆ ತಲಾ 50 ಸಾವಿರ ರೂಪಾಯಿ ಚಾರ್ಜ್ ಮಾಡಲಾಗುತ್ತಿದೆ.

ನವದೆಹಲಿ: ಕೊರೋನಾ ಮಹಾಮಾರಿ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ವಿದೇಶಗಳಲ್ಲಿ ಸಿಲುಕಿರುವ ಸುಮಾರು 15 ಸಾವಿರ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಮುಂದಾಗಿದ್ದು, ಲಂಡನ್- ದೆಹಲಿ ಪ್ರಯಾಣಕ್ಕೆ ತಲಾ 50 ಸಾವಿರ ರೂಪಾಯಿ ಚಾರ್ಜ್ ಮಾಡಲಾಗುತ್ತಿದೆ.
ಮೇ 7ರಿಂದ 13ರ ವರೆಗೆ ಏರ್ ಇಂಡಿಯಾದ 64 ವಿಮಾನಗಳು ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲಿವೆ ಎಂದು ನಾಗರಿ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಹೇಳಿದ್ದಾರೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ವಿಷಯ ತಿಳಿಸಿದ ಪುರಿ, ವಿದೇಶದಲ್ಲಿರುವ ಭಾರತೀಯರನ್ನು ಕರೆತರಲು ಚಾರ್ಜ್ ಮಾಡಲಾಗುತ್ತಿದ್ದು, ಲಂಡನ್ - ದೆಹಲಿ ವಿಮಾನ ಪ್ರಯಾಣಕ್ಕೆ 50 ಸಾವಿರ, ಢಾಕಾ-ದೆಹಲಿ ಪ್ರಯಾಣಕ್ಕೆ 12 ಸಾವಿರ ಟಿಕಿಟ್ ದರ ನಿಗದಿಪಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಪ್ರಯಾಣಕ್ಕೂ ಮುನ್ನ ಎಲ್ಲಾ ಪ್ರಯಾಣಿಕರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಾಲಗುವುದು ಮತ್ತು ಇಲ್ಲಿಗೆ ಬಂದ ನಂತರ 14 ದಿನಗಳ ಕಾಲ ಕ್ವಾರಂಟೈನ್ ಒಳಪಡಿಸಲಾಗುವುದು ಎಂದು ಪುರಿ ಹೇಳಿದ್ದಾರೆ.
ಯುಎಇ, ಅಮೆರಿಕ, ಇಂಗ್ಲೆಂಡ್, ಮಲೇಷ್ಯಾ, ಸಿಂಗಾಪುರ್, ಫಿಲಿಪ್ಪಿನ್ಸ್, ಸೌದಿ ಅರೇಬಿಯಾ, ಕತಾರ್, ಬಾಂಗ್ಲಾದೇಶ, ಬಹ್ರೇನ್, ಕುವೈತ್ ಮತ್ತಿತ್ತರ ದೇಶಗಳಿಂದ ಅನಿವಾಸಿ ಭಾರತೀಯರನ್ನು ಕರೆತರಬೇಕಿದೆ. ಇನ್ನು ಯುಎಇ ಮತ್ತು ಮಾಲ್ಡೀವ್ಸ್ ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಇಂದು ನೌಕಾಸೇನೆಯ 3 ಹಡಗುಗಳನ್ನು ಕಳುಹಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


