ದೇಶ

ಮಧ್ಯ ಪ್ರದೇಶ: ಕ್ವಾರಂಟೈನ್ ವಿಚಾರಕ್ಕೆ ಜಗಳ, ಮಗನನ್ನೇ ಕೊಲೆ ಮಾಡಿದ ತಂದೆ

ಮನೆ ಅಥವಾ ಸಾಂಸ್ಥಿಕ ಕ್ವಾರಂಟೈನ್ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಮತ್ತು ಮಗನ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ದಾರುಣ ಘಟನೆ ಮಧ್ಯ ಪ್ರದೇಶದ ಬಲಘಾಟ್ ಜಿಲ್ಲೆಯಲ್ಲಿ ನಡೆದಿದೆ.

ಮಧ್ಯ ಪ್ರದೇಶ: ಕ್ವಾರಂಟೈನ್ ವಿಚಾರಕ್ಕೆ ಜಗಳ, ಮಗನನ್ನೇ ಕೊಲೆ ಮಾಡಿದ ತಂದೆ
ಸಾಂದರ್ಭಿಕ ಚಿತ್ರ
Published On :

ಭೋಪಾಲ್: ಮನೆ ಅಥವಾ ಸಾಂಸ್ಥಿಕ ಕ್ವಾರಂಟೈನ್ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ ಮತ್ತು ಮಗನ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ದಾರುಣ ಘಟನೆ ಮಧ್ಯ ಪ್ರದೇಶದ ಬಲಘಾಟ್ ಜಿಲ್ಲೆಯಲ್ಲಿ ನಡೆದಿದೆ.

ಬಲಘಾಟ್ ಜಿಲ್ಲೆಯ ಗರ್ಹಿಯ ಕುಗಾಂವ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬುಡಕಟ್ಟು ವಲಸೆ ಕಾರ್ಮಿಕನೊಬ್ಬ ತನ್ನ ತಂದೆಯಿಂದಲೇ ಕೊಲೆಯಾಗಿದ್ದಾನೆ.

ವರದಿಗಳ ಪ್ರಕಾರ, ತೇಕಚಂದ್ ಪಂಚತಿಲಕ್ ಎಂಬ ಕಾರ್ಮಿಕ ಇತ್ತೀಚಿಗೆ ಹೈದರಾಬಾದ್ ನಿಂದ ತನ್ನ ಊರಿಗೆ ಮರಳಿದ್ದ. ಬಲಘಾಟ್ ಜಿಲ್ಲೆಯ ಅಧಿಕಾರಿಗಳು ಆತನನ್ನು ಒಂದು ದಿನದ ಮಟ್ಟಿಗೆ ಸಂಸ್ಥಾಕಿ ಕ್ವಾರಂಟೈನ್ ನಲ್ಲಿಟ್ಟಿದ್ದರು. ಬಳಿಕ ಮುಂದಿನ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ನಲ್ಲಿರುವಂತೆ ಸೂಚಿಸಿದ್ದರು. ಅದರಂತೆ ಪಂಚತಿಲಕ್ ಅವರು ಮನೆಗೆ ತೆರಳಿದ್ದಾರೆ. ಆದರೆ ಮಗನನ್ನು ಮನೆ ಒಳಗೆ ಬಿಟ್ಟುಕೊಳ್ಳದ ಆತನ ತಂದೆ ಭೀಮಲಾಲ್ ಅವರು, ಗ್ರಾಮ ಪಂಚಾಯ್ತಿ ವ್ಯವಸ್ಥೆ ಮಾಡಿರುವ ಸಂಸ್ಥೆಯಲ್ಲೇ ಕ್ವಾರಂಟೈನ್ ಗೆ ಒಳಗಾಗು ಎಂದು ಹೇಳಿದ್ದಾರೆ. ಆದರೆ ಅದಕ್ಕೆ ಪಂಚತಿಲಕ್ ಒಪ್ಪಿಕೊಂಡಿಲ್ಲ. ಈ ವೇಳೆ ಇಬ್ಬರ ನಡುವೆ ಜಗಳವಾಗಿದ್ದು, ತಾಳ್ಮೆ ಕಳೆದುಕೊಂಡ ತಂದೆ ದೊಣ್ಣೆಯಿಂದ ಮಗನ ತಲೆಗೆ ಹೊಡೆದಿದ್ದಾರೆ. 

ಗಂಭೀರವಾಗಿ ಗಾಯಗೊಂಡಿದ್ದ ಪಂಚತಿಲಕ್ ಅವರನ್ನು ಕೂಡಲೇ ಸಮೀಪದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಪಂಚತಿಲಕ್ ದಾರಿ ಮಧ್ಯಯೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.