8 ಗಂಟೆಗಳ ಬದಲಿಗೆ 12 ಗಂಟೆಗಳ ಕಾಲ ಕೆಲಸ ಮಾಡಲು ಮಹಾರಾಷ್ಟ್ರ ಸರ್ಕಾರ ಅನುಮತಿ
ಲಾಕ್‌ಡೌನ್‌ನಿಂದ ಉಂಟಾಗಿರುವ ಉತ್ಪಾದನೆ ಮತ್ತು ಕಾರ್ಮಿಕರ ಕೊರತೆಯನ್ನು ನೀಗಿಸುವ ಸಲುವಾಗಿ ಕಾರ್ಮಿಕರನ್ನು ಕಾರ್ಖಾನೆಗಳಲ್ಲಿ 8 ಗಂಟೆ ಬದಲಿಗೆ 12 ಗಂಟೆ ದುಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿದೆ.

ಮುಂಬಯಿ: ಲಾಕ್‌ಡೌನ್‌ನಿಂದ ಉಂಟಾಗಿರುವ ಉತ್ಪಾದನೆ ಮತ್ತು ಕಾರ್ಮಿಕರ ಕೊರತೆಯನ್ನು ನೀಗಿಸುವ ಸಲುವಾಗಿ ಕಾರ್ಮಿಕರನ್ನು ಕಾರ್ಖಾನೆಗಳಲ್ಲಿ 8 ಗಂಟೆ ಬದಲಿಗೆ 12 ಗಂಟೆ ದುಡಿಸಿಕೊಳ್ಳಲು ಮಹಾರಾಷ್ಟ್ರ ಸರ್ಕಾರ ಅನುಮತಿ ನೀಡಿದೆ.
ಕಳೆದ 6 ವಾರಗಳಿಂದ ರಾಷ್ಟ್ರದಾದ್ಯಂತ ಲಾಕ್‌ಡೌನ್ ಜಾರಿಯಲ್ಲಿದೆ. ಹೀಗಾಗಿ ಕಾರ್ಖಾನೆಗಳನ್ನು ಮುಚ್ಚಲ್ಪಟ್ಟಿದ್ದು ಉತ್ಪಾದನಾ ವಲಯ ಬಹುತೇಕ ಸ್ಥಗಿತವಾಗಿದೆ. ಹೀಗಾಗಿ ಲಾಕ್‌ಡೌನ್ ಅವಧಿ ಮುಗಿದ ನಂತರ ಕಾರ್ಮಿಕರನ್ನು 8 ಗಂಟೆ ಬದಲಿಗೆ 12 ಗಂಟೆ ದುಡಿಸಿಕೊಳ್ಳಬೇಕು ಎಂಬ ಮಾತುಗಳು ಕೇಳಿ ಬಂದಿದ್ದವು.
ಈ ನಡುವೆ ದೇಶದ ನಾನಾ ಮೂಲೆಯಲ್ಲಿದ್ದ ವಲಸೆ ಕಾರ್ಮಿಕರು ಅವರವರ ರಾಜ್ಯಗಳಿಗೆ ಹಿಂದಿರುಗಿದ್ದು, ಇದೀಗ ಕಾರ್ಮಿಕರ ಕೊರತೆಯೂ ಉಂಟಾಗಿರುವುದರಿಂದ ಮಹಾರಾಷ್ಟ್ರ ಸರ್ಕಾರ ಬೇರೆ ದಾರಿ ಕಾಣದೆ ಕಾರ್ಮಿಕರನ್ನು 8 ಗಂಟೆ ಬದಲಿಗೆ 12 ಗಂಟೆ ಶಿಫ್ಟ್‌ನಲ್ಲಿ ದುಡಿಸಿಕೊಳ್ಳಲು ಅನುಮತಿ ನೀಡಿದೆ. ಆದರೆ, ಸರ್ಕಾರದ ಈ ನಿರ್ಧಾರಕ್ಕೆ ಕಾರ್ಮಿಕ ಸಂಘಗಳು ವಿರೋಧ ವ್ಯಕ್ತಪಡಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


