ಕೇರಳ ಸೇರಿ 13 ರಾಜ್ಯಗಳಲ್ಲಿ ಹೊಸ ಕೊರೋನಾ ಪ್ರಕರಣ ಪತ್ತೆಯಾಗಿಲ್ಲ: ಕೇಂದ್ರ
ಕೇರಳ, ಒಡಿಶಾ ಮತ್ತು ಜಮ್ಮು, ಕಾಶ್ಮೀರ ಸೇರಿದಂತೆ ದೇಶದ 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ ಯಾವುದೇ ಹೊಸ ಕೊವಿಡ್-19 ಪ್ರಕರಣ ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಗುರುವಾರ ಹೇಳಿದ್ದಾರೆ.

ನವದೆಹಲಿ: ಕೇರಳ, ಒಡಿಶಾ ಮತ್ತು ಜಮ್ಮು, ಕಾಶ್ಮೀರ ಸೇರಿದಂತೆ ದೇಶದ 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ ಯಾವುದೇ ಹೊಸ ಕೊವಿಡ್-19 ಪ್ರಕರಣ ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಗುರುವಾರ ಹೇಳಿದ್ದಾರೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3, 561 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 1084 ಸೋಂಕಿತರು ಗುಣಂಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಸಚಿವರು ತಿಳಿಸಿದರು.
ಇತರ ದೇಶಗಳಿಗೆ ಹೋಲಿಸಿದರೆ, ಭಾರತವು ಉತ್ತಮ ಸ್ಥಿತಿಯಲ್ಲಿದೆ, ಏಕೆಂದರೆ ಕೊರೋನಾ ಸಾವಿನ ಪ್ರಮಾಣವು ಶೇಕಡಾ 3.3 ಮತ್ತು ಚೇತರಿಕೆ ಪ್ರಮಾಣ 28.83 ರಷ್ಟು ಎಂದರು.
ಒಟ್ಟು 35,902 ಸಕ್ರಿಯ ಪ್ರಕರಣಗಳಲ್ಲಿ, ಶೇ. 4.8 ರಷ್ಟು ರೋಗಿಗಳು ಐಸಿಯುನಲ್ಲಿದ್ದಾರೆ. ಶೇ. 1.1 ರಷ್ಟು ವೆಂಟಿಲೇಟರ್ ಮತ್ತು ಶೇ. 3.3 ರಷ್ಟು ರೋಗಿಗಳಿಗೆ ಆಕ್ಸಿಜನ್ ಅಳವಡಿಸಲಾಗಿದೆ ಎಂದರು.
ದೇಶದಲ್ಲಿ ಇದುವರೆಗೆ ಒಟ್ಟಾರೆ 1,783 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


