ದೆಹಲಿಯಿಂದ ರಾಜ್ಯಕ್ಕೆ ವಿಶೇಷ ರೈಲು,ದುಬೈನಿಂದ ಬೆಂಗಳೂರಿಗೆ ವಿಶೇಷ ವಿಮಾನ-ಸದಾನಂದಗೌಡ
ಲಾಕ್ ಡೌನ್ ನಿಂದಾಗಿ ಉತ್ತರ ಭಾರತದಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ತಮ್ಮ ರಾಜ್ಯಕ್ಕೆ ಮರಳಲು ವಿಶೇಷ ರೈಲು ಸಂಚಾರ ಮಾಡಲು ರೈಲ್ವೆ ಇಲಾಖೆ ಸಮ್ಮತಿಸಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.

ನವದೆಹಲಿ: ಲಾಕ್ ಡೌನ್ ನಿಂದಾಗಿ ಉತ್ತರ ಭಾರತದಲ್ಲಿ ಸಿಕ್ಕಿಹಾಕಿಕೊಂಡಿರುವ ಕನ್ನಡಿಗರು ತಮ್ಮ ರಾಜ್ಯಕ್ಕೆ ಮರಳಲು ವಿಶೇಷ ರೈಲು ಸಂಚಾರ ಮಾಡಲು ರೈಲ್ವೆ ಇಲಾಖೆ ಸಮ್ಮತಿಸಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ರೇಲ್ವೆ ಸಚಿವ ಪಿಯುಶ್ ಗೋಯಲ್ ಅವರೊಂದಿಗೆ ತಾವು ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಒಂದೆರಡು ದಿನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ರೈಲು ಸಂಚರಿಸಲಿದೆ ಎಂದಿದ್ದಾರೆ.
ದೆಹಲಿಯ ಹೊರತಾಗಿ ಹರಿಯಾಣ, ಪಂಜಾಬ್ ಮತ್ತಿತರ ಸಮೀಪದ ಸ್ಥಳಗಳಿಂದಲೂ ರಾಜ್ಯಕ್ಕೆ ವಾಪಸ್ ಆಗಲು ಅಲ್ಲಿರುವ ಕನ್ನಡಿಗರು ಕಾತರರಾಗಿದ್ದು, ಆ ರಾಜ್ಯಗಳ ಅಧಿಕಾರಿಗಳ ಜೊತೆ ಮಾತನಾಡಿ ಅಲ್ಲಿರುವ ಕನ್ನಡಿಗರನ್ನು ಕೂಡಲೇ ದೆಹಲಿಗೆ ಕರೆಸಿಕೊಂಡು ಅವರನ್ನೂ ಇದೇ ರೈಲಿನಲ್ಲಿ ಕರ್ನಾಟಕಕ್ಕೆ ಕಳುಹಿಸಿಕೊಡಲು ಅಗತ್ಯ ವ್ಯವಸ್ಥೆ ಮಾಡುವಂತೆ ದೆಹಲಿಯಲ್ಲಿರುವ ರಾಜ್ಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


