ದೇಶ

ಪಂಜಾಬ್ ನಲ್ಲಿ ಭಾರತೀಯ ವಾಯುಸೇನೆಯ ಮಿಗ್-29 ಯುದ್ಧ ವಿಮಾನ ಪತನ

ಭಾರತೀಯ ವಾಯುಸೇನೆಗೆ ಸೇರಿದೆ ಮಿಗ್-29 ಯುದ್ಧ ವಿಮಾನ ಇಂದು ಬೆಳಗ್ಗೆ ಪಂಜಾಬ್ ನಲ್ಲಿ ಪತನವಾಗಿದೆ ಎಂದು ತಿಳಿದುಬಂದಿದೆ.

ಪಂಜಾಬ್ ನಲ್ಲಿ ಭಾರತೀಯ ವಾಯುಸೇನೆಯ ಮಿಗ್-29 ಯುದ್ಧ ವಿಮಾನ ಪತನ
ಮಿಗ್-29 ಯುದ್ಧ ವಿಮಾನ ಪತನ
Published On :

ಚಂಡೀಘಡ: ಭಾರತೀಯ ವಾಯುಸೇನೆಗೆ ಸೇರಿದೆ ಮಿಗ್-29 ಯುದ್ಧ ವಿಮಾನ ಇಂದು ಬೆಳಗ್ಗೆ ಪಂಜಾಬ್ ನಲ್ಲಿ ಪತನವಾಗಿದೆ ಎಂದು ತಿಳಿದುಬಂದಿದೆ.

ಪಂಜಾಬ್ ನ ನವಾನ್ ಶಹರ್ ನಲ್ಲಿ ಇಂದು ಬೆಳಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಯುದ್ಧ ವಿಮಾನ ಪತನಕ್ಕೂ ಮುನ್ನ ಪೈಲಟ್ ಪ್ಯಾರಾಚೂಟ್ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಿರ್ಜನ ಪ್ರದೇಶದಲ್ಲಿ ವಿಮಾನಪತನವಾಗಿದ್ದರಿಂದ ಹೆಚ್ಚಿನ ಸಾವು-ನೋವು ಸಂಭವಿಸಿಲ್ಲ. ಪ್ರಸ್ತುತ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ದೌಡಾಯಿಸಿದ್ದು, ಪೈಲಟ್ ರನ್ನು ರಕ್ಷಿಸಿದ್ದಾರೆ. ಅಂತೆಯೇ ವಾಯುಸೇನೆಯ ಉನ್ನತಾಧಿಕಾರಿಗಳು ಕೂಡ ಅಪಘಾತ ಸ್ಥಳಕ್ಕೆ ಆಗಮಿಸುತ್ತಿದ್ದು,  ಅಪಘಾತ ಮಾಹಿತಿ ಪಡೆಯಲಿದ್ದಾರೆ.

ವಿಮಾನ ಪತನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ತಾಂತ್ರಿಕ ದೋಷದಿಂದ ವಿಮಾನ ಪತನವಾಗಿರಬಹುದು ಎಂದು ಹೇಳಲಾಗುತ್ತಿದೆ. 

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.