ಪಿಎಂ ಕೇರ್ಸ್ ಫಂಡ್ ಪಾರದರ್ಶಕವಾಗಿರಬೇಕು: ರಾಹುಲ್ ಗಾಂಧಿ ಆಗ್ರಹ
ಪಿಎಂ ಕೇರ್ಸ್ ನಿಧಿಯ ಬಗ್ಗೆ ಹೆಚ್ಚುತ್ತಿರುವ ವಿವಾದ, ಗೊಂದಲದ ಮಧ್ಯೆಯೇ , ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರು ನಿಧಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಆಗ್ರಹಪಡಿಸಿದ್ದಾರೆ.

ನವದೆಹಲಿ: ಪಿಎಂ ಕೇರ್ಸ್ ನಿಧಿಯ ಬಗ್ಗೆ ಹೆಚ್ಚುತ್ತಿರುವ ವಿವಾದ, ಗೊಂದಲದ ಮಧ್ಯೆಯೇ , ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರು ನಿಧಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಆಗ್ರಹಪಡಿಸಿದ್ದಾರೆ.
ಪಿಎಂ ಕೇರ್ಸ್ ಫಂಡ್ ಪಾರದರ್ಶಕವಾಗಿರಬೇಕು. ಆಡಿಟ್ ಇರಬೇಕು. ಎಷ್ಟು ಹಣವನ್ನು ಸಂಗ್ರಹಿಸಲಾಗಿದೆ, ಮತ್ತು ಅದನ್ನು ಎಲ್ಲಿ ಖರ್ಚು ಮಾಡಲಾಗಿದೆ ಎಂಬುದರ ಜನರಿಗೆ ಸರಿಯಾದ ಮಾಹಿತಿ ಕೊಡಬೇಕು ಎಂದರು.
ಲೆಕ್ಕಪರಿಶೋಧನೆಯಲ್ಲಿ ಸರ್ಕಾರಕ್ಕೆ ಯಾವುದೇ ಸಮಸ್ಯೆ ಇರಬಾರದು! ಎಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಆರೋಗ್ಯಾ ಸೇತು ಆ್ಯಪ್‌ನ ಪಾರದರ್ಶಕತೆ ಕುರಿತು ಅವರು ತಮ್ಮ ಅನುಮಾನಗಳನ್ನು ರಾಹುಲ್ ಮತ್ತೆ ಪುನರುಚ್ಚರಿಸಿದ್ದಾರೆ. ಕೊರೋನ ಸೋಂಕಿನ ಬಿಕ್ಕಟ್ಟಿನ ನಡುವೆ ಜನರಿಗೆ ಸಹಾಯ ಮಾಡಲು ಸರ್ಕಾರವು ಆ್ಯಪ್ ಬಳಸುವುದಕ್ಕೆ ಯಾವುದೇ ತೊಂದರೆಗಳಿಲ್ಲ, ಆದರೆ ಪಾರದರ್ಶಕತೆ ಕಾಪಾಡಬೇಕು ಎಂದರು. ಎನ್‌ಡಿಎ ಸರ್ಕಾರವು ಪಿಎಂ ಕೇರ್ಸ್ ಫಂಡ್‌ನ ಲೆಕ್ಕಪರಿಶೋಧನೆಯನ್ನು ತಳ್ಳಿಹಾಕಿದ ನಂತರ ಅವರು ಈ ರಾಹುಲ್ ಇದರ ಬಗ್ಗೆ ಆಗ್ರಹ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


