ಲಾಕ್ ಡೌನ್ ನಲ್ಲಿ ಸಿಲುಕಿದ್ದ 2.5 ಲಕ್ಷ ಜನರನ್ನು ತವರಿಗೆ ತಲುಪಿಸಿದ ರೈಲ್ವೆ
ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ವಿವಿಧ ಸ್ಥಳಗಳಲ್ಲಿ ಸಿಲುಕಿದ್ದ ಸುಮಾರು 2.5 ಲಕ್ಷ ವಲಸೆ ಕಾರ್ಮಿಕರನ್ನು 222 ವಿಶೇಷ ರೈಲುಗಳ ಮೂಲಕ ಅವರ ಊರುಗಳಿಗೆ ತಲುಪಿಸಲಾಗಿದೆ.

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ವಿವಿಧ ಸ್ಥಳಗಳಲ್ಲಿ ಸಿಲುಕಿದ್ದ ಸುಮಾರು 2.5 ಲಕ್ಷ ವಲಸೆ ಕಾರ್ಮಿಕರನ್ನು 222 ವಿಶೇಷ ರೈಲುಗಳ ಮೂಲಕ ಅವರ ಊರುಗಳಿಗೆ ತಲುಪಿಸಲಾಗಿದೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಪುಣ್ಯ ಸಲಿಲ ಶ್ರಿವಾತ್ಸವ್ ಅವರು, ಲಾಕ್ ಡೌನ್ ಮಾರ್ಗಸೂಚಿಗಳ ಪ್ರಕಾರವೇ ಜನರಿಗೆ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ ಎಂದರು.
ಇದೇ ವೇಳೆ ಔರಂಗಬಾದ್ ನಲ್ಲಿ ಗೂಡ್ಸ್ ರೈಲಿಗೆ ಸಿಲುಕಿ 16 ವಲಸೆ ಕಾರ್ಮಿಕರು ಮೃತಪಟ್ಟ ಬಗ್ಗೆ ಪ್ರತಿಕ್ರಿಯಿಸಿದ ಪುಣ್ಯ ಅವರು, ಇದೊಂದು ದುರದೃಷ್ಟಕರ ಘಟನೆ ಎಂದರು.
ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಹಂತ ಹಂತವಾಗಿ ವಾಣಿಜ್ಯ ವಿಮಾನ ಮತ್ತು ಹಡಗುಗಳ ಮೂಲಕ ಕರೆತರಲಾಗುವುದು. ಈ ಸಂಬಂಧ ಅಂತರ್ ಸಚಿವಾಲಯ ಸಹಕಾರ ಸಮಿತಿ ರಚಿಸಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


