ಛತ್ತೀಸ್ ಘರ್ ಮಾಜಿ ಸಿಎಂ ಅಜಿತ್ ಜೋಗಿ ಆರೋಗ್ಯ ಸ್ಥಿತಿ ಗಂಬೀರ, ಆಸ್ಪತ್ರೆಗೆ ದಾಖಲು
ಛತ್ತೀಸ್ ಘರ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ (74) ತೀವ್ರ ಹೃದಯಾಘಾತದಿಂದಾಗಿ ಶನಿವಾರ ರಾಯ್‌ಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ರಾಯ್ ಪುರ: ಛತ್ತೀಸ್ ಘರ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ (74) ತೀವ್ರ ಹೃದಯಾಘಾತದಿಂದಾಗಿ ಶನಿವಾರ ರಾಯ್‌ಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಅಜಿತ್ ಜೋಗಿ ಅವರ ಕುಟುಂಬ ಸದಸ್ಯರು ನೀಡಿದ ಮಾಹಿತಿಯನ್ನು ಉಲ್ಲೇಖಿಸಿಅವರು ಬೆಳಿಗ್ಗೆ ತಮ್ಮ ನಿವಾಸದಲ್ಲಿ ಪ್ರಜ್ಞೆ ತಪ್ಪಿದ್ದರು ಬಳಿಕ ಅವರನ್ನು ಆಸ್ಪತ್ರೆಗೆ ಕರೆತರಲಾಗಿದೆ ಎಂದು ವೈದ್ಯರು ಹೇಳಿದರು.ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿ ಉಪಾಹಾರ ಸೇವಿಸುವಾಗ ತಂದೆಯ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿದೆ ಎಂದು ತಿಳಿಸಿದ್ದಾರೆ.
ಶ್ರೀ ನಾರಾಯಣ ಆಸ್ಪತ್ರೆಯಿಂದ ಬಿಡುಗಡೆಯಾದ ಆರೋಗ್ಯ ಬುಲೆಟಿನ್ ಪ್ರಕಾರ, ಅಜಿತ್ ಜೋಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮೊದಲು ಅವರುಗೆ ಅವರ ನಿವಾಸದಲ್ಲೇ ಹೃದಯ-ಶ್ವಾಸಕೋಶದ ಪುನಶ್ಚೇತನ ಕ್ರಿಯೆಯನ್ನು ನಡೆಸಲಾಗಿದೆ.
"ಜೋಗಿ ಹೃದಯ ಸ್ತಂಭನದಿಂದ ಬಳಲುತ್ತಿದ್ದರು. ಅವರ ಇಸಿಜಿ ಮತ್ತು ನಾಡಿ ಪರೀಕ್ಷೆ ನಡೆದಿದ್ದು ಅದು ಸಾಮಾನ್ಯ ಸ್ಥಿತಿಗೆ ಮರಳಿದೆ. ಹೃದಯ ಬಡಿತಗಳು ಸಾಮಾನ್ಯ ಸ್ಥಿತಿಗೆ ಮರಳುತ್ತಿದ್ದು ಅವರ ಉಸಿರಾಟ ಇನ್ನೂ ಸಾಮಾನ್ಯ ಸ್ಥಿತಿಗೆ ಬಂದಿಲ್ಲ. ಅವರು ವೆಂಟಿಲೇಟರ್‌ನಲ್ಲಿದ್ದಾರೆ ಮತ್ತು ಅವರ ಸ್ಥಿತಿ ಗಂಭೀರಆಗಿದೆ" ಅಜಿತ್ ಜೋಗಿ ಅವರ ಪತ್ನಿ, ಶಾಸಕಿ ರೇಣು ಜೋಗಿ ಪತಿಯೊಡನೆ ಆಸ್ಪತ್ರೆಯಲ್ಲಿದ್ದಾರೆ.
ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಅವರು ಅಮಿತ್ ಜೋಗಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಮಾಜಿ ಸಿಎಂ ಅವರ ಆರೋಗ್ಯ ವಿಚಾರಿಸಿದ್ದಾರೆ.,ಆತ್ರವಲ್ಲ ಜೋಗಿಯವರ ಉತ್ತಮ ಆರೋಗ್ಯ ಚಿಕಿತ್ಸೆಗೆ ಅಗತ್ಯ ಕ್ರಮವನ್ನು ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದರು
ಅಜಿತ್ ಜೋಗಿ ಛತ್ತೀಸ್ ಘರ್ ರಾಜ್ಯ ರಚನೆಯ ಬಳಿಕ ರ ನವೆಂಬರ್ 2000 ರಿಂದ 2003 ರ ನವೆಂಬರ್ ವರೆಗೆ ಅಂದಿನ ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.ಕೆಲ ಆರೋಪಗಳು ಕೇಳಿ ಬಂದ ನಂತರ ಅಜಿತ್ ಜೋಗಿ ಹಾಗೂ ಅವರ ಪುತ್ರ ಕಾಂಗ್ರೆಸ್ ತೊರೆದಿದ್ದು 2016 ರಲ್ಲಿ ಅವರು ತಮ್ಮದೇ ಆದ ಜನತಾ ಕಾಂಗ್ರೆಸ್ ಛತ್ತೀಸ್ ಘರ್ ಪಕ್ಷ ಕಟ್ಟಿದ್ದರು. ಸಧ್ಯ ಅವರು ಮಾರ್ವಾಹಿ ಕ್ಷೇತ್ರದ ಶಾಸಕರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


