ಮಧ್ಯಪ್ರದೇಶ: ಮಗುಚಿ ಬಿದ್ದ ಟ್ರಕ್; 5 ವಲಸೆ ಕಾರ್ಮಿಕರು ಸಾವು, 15 ಜನರಿಗೆ ಗಾಯ
ಮಧ್ಯಪ್ರದೇಶದಲ್ಲಿ ಮಾವಿನಹಣ್ಣುಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ವೊಂದು ಮಗುಚಿಬಿದ್ದ ಪರಿಣಾಮ 5 ಮಂದಿ ವಲಸೆ ಕಾರ್ಮಿಕರು ಧಾರುಣ ಸಾವನ್ನಪ್ಪಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ನರ್ಸಿಂಗ್ಪುರ: ಮಧ್ಯಪ್ರದೇಶದಲ್ಲಿ ಮಾವಿನಹಣ್ಣುಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ವೊಂದು ಮಗುಚಿಬಿದ್ದ ಪರಿಣಾಮ 5 ಮಂದಿ ವಲಸೆ ಕಾರ್ಮಿಕರು ಧಾರುಣ ಸಾವನ್ನಪ್ಪಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ವಲಸೆ ಕಾರ್ಮಿಕರು ಹೈದರಾಬಾದ್ ನಿಂದ ಉತ್ತರಪ್ರದೇಶಕ್ಕೆ ತೆರಳುತ್ತಿದ್ದರು. ಟ್ರಕ್ ನಲ್ಲಿ ಒಟ್ಟು 20 ಮಂದಿ ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದರು.
ಟ್ರಕ್ ಮಧ್ಯಪ್ರದೇಶದ ನರ್ಸಿಂಗ್ಪುರದತ್ತ ಬರುತ್ತಿದ್ದಂತೆಯೇ ಲಾರಿ ಮಗುಚಿ ಬಿದ್ದಿದೆ. ಪರಿಣಾಮ ಐವರು ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಎಲ್ಲರನ್ನೂ ಕೊರೋನಾ ವೈರಸ್ ಪರೀಕ್ಷೆಗೆ ಒಳಪಡಿಸಲಾಗಿದೆ. ಈ ವೇಳೆ ಓರ್ವ ಕಾರ್ಮಿಕನಲ್ಲಿ ವೈರಸ್ ಲಕ್ಷಣಗಳು ಕಂಡು ಬಂದಿದೆ ಎನ್ನಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


