ಕೋವಿಡ್-19: ಭಾರತದಲ್ಲಿ 62,939ಕ್ಕೇರಿದ ಸೋಂಕಿತರ ಸಂಖ್ಯೆ, 2,109 ಮಂದಿ ಬಲಿ
ದೇಶದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ 62,939ಕ್ಕೆ ಏರಿಕೆಯಾಗಿದೆ. ಅಲ್ಲದೆ, ಮಹಾಮಾರಿ ವೈರಸ್'ಗೆ 2,109 ಮಂದಿ ಬಲಿಯಾಗಿದ್ದಾರೆ.

ನವದೆಹಲಿ: ದೇಶದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಸೋಂಕಿತರ ಸಂಖ್ಯೆ 62,939ಕ್ಕೆ ಏರಿಕೆಯಾಗಿದೆ. ಅಲ್ಲದೆ, ಮಹಾಮಾರಿ ವೈರಸ್'ಗೆ 2,109 ಮಂದಿ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,277 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 128 ಮಂದಿ ಬಲಿಯಾಗಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯೊಂದರಲ್ಲಿಯೇ ನಿನ್ನೆ 338 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 6,000ಕ್ಕೆ ಏರಿಕೆಯಾಗಿದೆ. ಈ ನಡುವೆ 62,000 ಮಂದಿ ಸೋಂಕಿತರ ಪೈಕಿ 17,846 ಸೋಂಕಿತರು ಗುಣಮುಖರಾಗಿದ್ದು, ಇದರೊಂದಿಗೆ ದೇಶದಲ್ಲಿ ಗುಣಮುಕರಾಗುತ್ತಿರುವವರ ಶೇಕಡಾವಾರು 29.91ಕ್ಕೆ ತಲುಪಿದೆ.
ದೇಶದಲ್ಲೇ ಅತೀ ಹೆಚ್ಚು ಸೋಂಕಿತರು ಮತ್ತು ಸಾವು ಕಂಡು ಬಂದ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ನಲ್ಲಿ ಶನಿವಾರವೂ ಹೆಚ್ಚಿನ ಪ್ರ್ಕರಣಗಳು ವರದಿಯಾಗಿದೆ. ಮಹಾರಾಷ್ಟ್ರದಲ್ಲಿ ಶನಿವಾರ 1165 ಹೊಸ ಕೇಸ್ ನೊಂದಿಗೆ ಒಟ್ಟು ಸಂಖ್ಯೆ 20,228ಕ್ಕೆ ಏರಿದೆ.
ಸಾವಿಗೀಡಾದವರ ಸಂಖ್ಯೆ 779ಕ್ಕೆ ಜಿಗಿದಿದೆ. ಇನ್ನು ತಮಿಳುನಾಡಿನಲ್ಲಿ 526, ಗುಜರಾತ್ ನಲ್ಲಿ 394, ರಾಜಸ್ತಾನದಲ್ಲಿ 129, ಮಧ್ಯಪ್ರದೇಶದಲ್ಲಿ 116 ಹಾಗೂ ಬಂಗಾಳದಲ್ಲಿ 108 ಅತೀಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗಿವೆ.
ಈ ವರೆಗೆ ಅತೀ ಹೆಚ್ಚು ಸಾವು ದಾಖಲಾದ ರಾಜ್ಯಗಳೆಂದರೆ ಮಹಾರಾಷ್ಟ್ರ 779, ಗುಜರಾತ್ 472, ಮಧ್ಯಪ್ರದೇಶ 311, ಪ.ಬಂಗಾಳ 171, ರಾಜಸ್ತಾನದಲ್ಲಿ 106 ಮಂದಿ ಬಲಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


