ಸಿಎಂಗಳ ಜೊತೆ ಮೋದಿ ವಿಡಿಯೋ ಕಾನ್ಫರೆನ್ಸ್: ಕೊರೋನಾ ಹೆಸರಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ; ಗುಡುಗಿದ ಮಮತಾ
ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸುತ್ತಿರುವ ವಿಡಿಯೋ ಕಾನ್ಫರೆನ್ಸ್ನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರ ವಿರುದ್ದ ತೀವ್ರ ರೀತಿಯ ಆರೋಪ ಮಾಡಿದ್ದಾರೆ.

ಕೊಲ್ಕತ್ತಾ: ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸುತ್ತಿರುವ ವಿಡಿಯೋ ಕಾನ್ಫರೆನ್ಸ್ನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರ ವಿರುದ್ದ ತೀವ್ರ ರೀತಿಯ ಆರೋಪ ಮಾಡಿದ್ದಾರೆ.
ಕೊರೊನಾ ವೈರಸ್ ಸಮಸ್ಯೆಯ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ತೀವ್ರ ರೀತಿಯ ಆಕ್ಷೇಪ ವ್ಯಕ್ತಪಡಿಸಿದರು.
ಈ ಸಂಕಷ್ಟ ಸಮಯದಲ್ಲಿ ಕೇಂದ್ರ ಸರ್ಕಾರ ಮೊದಲೇ ಸ್ಕ್ರಿಪ್ಟ್ ಸಿದ್ದಪಡಿಸಿಕೊಂಡು, ಅದಕ್ಕೆ ಅನುಗುಣವಾಗಿ ರಾಜ್ಯಗಳಲ್ಲಿ ಬದಲಾವಣೆಗೆ ಸೂಚಿಸುತ್ತಿದೆ ಎಂದು ತೀವ್ರವಾಗಿ ಆರೋಪಿಸಿದರು.
ಯಾರೊಬ್ಬರು ತಮ್ಮ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ, ಮನಸ್ಸಿಗೆ ಬಂದಂತೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರದ ವಿರುದ್ದ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


