ತಮಿಳು ಸುದ್ದಿ ವಾಹಿನಿಯ ನ್ಯೂಸ್ ಆಂಕರ್, ವಿಡಿಯೋ ಎಡಿಟರ್ ಗೆ ಕೋವಿಡ್- 9 ಸೋಂಕು
ತಮಿಳು ಸುದ್ದಿವಾಹಿನಿಯೊಂದರ ಆಂಕರ್ ಮತ್ತು ವಿಡಿಯೋ ಎಡಿಟರ್ ಗೆ ಕೋವಿಡ್-19 ಸೋಂಕು ದೃಢಪಟ್ಟ ಬಳಿಕ ಅಲ್ಲಿ ಕೆಲಸ ಮಾಡುತ್ತಿದ್ದ ಎಲ್ಲಾ ನೌಕರರ ಮಾದರಿಯನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ.

ಚೆನ್ನೈ: ತಮಿಳು ಸುದ್ದಿವಾಹಿನಿಯೊಂದರ ಆಂಕರ್ ಮತ್ತು ವಿಡಿಯೋ ಎಡಿಟರ್ ಗೆ ಕೋವಿಡ್-19 ಸೋಂಕು ದೃಢಪಟ್ಟ ಬಳಿಕ
ಅಲ್ಲಿ ಕೆಲಸ ಮಾಡುತ್ತಿದ್ದ ಎಲ್ಲಾ ನೌಕರರ ಮಾದರಿಯನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ.
ಎಕ್ಕಟ್ಟುತಂಗಲ್ ನಲ್ಲಿರುವ ಸುದ್ದಿ ವಾಹಿನಿಯ ನ್ಯೂಸ್ ಆಂಕರ್ ಮತ್ತು ನಿರ್ಮಾಪಕರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟ ಬಳಿಕ ಅವರ ಸಂಪರ್ಕದಲ್ಲಿದ್ದ ವಿಡಿಯೋ ಎಡಿಟರ್ ಒಬ್ಬರಿಗೂ ಸೋಂಕು ತಗುಲಿದೆ.
ಈ ಇಬ್ಬರು ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚಲಾಗುತ್ತಿದೆ. ಅವರ ಸಹೋದ್ಯೋಗಿಗಳಿಂದ ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆದಾಗ್ಯೂ, ಇತರ ಕೆಲವರಿಗೂ ಕೋವಿಡ್ -19 ಸೋಂಕು ತಗುಲಿರುವ ಶಂಕೆ ಇದೆ. ಆದರೆ, ಎಷ್ಟು ಜನ ಎಂಬುದು ಈವರೆಗೂ ಅಧಿಕೃತವಾಗಿ ತಿಳಿದುಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


