ಕೊರೋನಾ ವೈರಸ್: ಭಾರತದಲ್ಲಿ 24 ಗಂಟೆಗಳಲ್ಲಿ 3,604 ಹೊಸ ಪಾಸಿಟಿವ್ ಪ್ರಕರಣಗಳು ದಾಖಲು, ಸೋಂಕಿತರ ಸಂಖ್ಯೆ 74,281ಕ್ಕೆ ಏರಿಕೆ
ಭಾರತದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ಮತ್ತೆ 3,604 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 74,281ಕ್ಕೆ ಏರಿಕೆಯಾಗಿದೆ.

ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ಮತ್ತೆ 3,604 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 74,281ಕ್ಕೆ ಏರಿಕೆಯಾಗಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶದ ವಿವಿಧ ರಾಜ್ಯಗಳಿಂದ ಒಟ್ಟಾರೆ 3,604 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 74,281ಕ್ಕೆ ಏರಿಕೆಯಾಗಿದೆ. ಅಂತೆಯೇ ಕಳೆದ 24 ಗಂಟೆಗಳಲ್ಲಿ 122 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 2,415ಕ್ಕೆ ಏರಿಕೆಯಾಗಿದೆ.
24,453 ಮಂದಿ ಗುಣಮುಖ
ಇನ್ನು ದೇಶದಲ್ಲಿ ಈ ವರೆಗೂ 24,453 ಮಂದಿ ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ 47480 ಮಂದಿ ಸೋಂಕಿತರು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


