ಇಂದು ಸಂಜೆ 4 ಕ್ಕೆ ವಿತ್ತ ಸಚಿವೆ ಮಾದ್ಯಮಗೋಷ್ಠಿ: 20 ಲಕ್ಷ ಕೋಟಿ ರೂ. ಪ್ಯಾಕೇಜ್ ನ ಇನ್ನಷ್ಟು ವಿವರಗಳ ನಿರೀಕ್ಷೆ
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ 4 ಗಂಟೆಗೆ ಮತ್ತೊಮ್ಮೆ ಪತ್ರಿಕಾಗೋಷ್ಠಿ ನಡೆಸುತ್ತಿದ್ದು ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮ್ಮ ಭಾಷಣದಲ್ಲಿ ಘೋಷಿಸಿದ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್‌ನ ಇನ್ನಷ್ಟು ವಿವರಗಳನ್ನು ಹಂಚಿಕೊಳ್ಳುವ ನಿರೀಕ್ಷೆಯಿದೆ.

ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ 4 ಗಂಟೆಗೆ ಮತ್ತೊಮ್ಮೆ ಪತ್ರಿಕಾಗೋಷ್ಠಿ ನಡೆಸುತ್ತಿದ್ದು ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮ್ಮ ಭಾಷಣದಲ್ಲಿ ಘೋಷಿಸಿದ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್‌ನ ಇನ್ನಷ್ಟು ವಿವರಗಳನ್ನು ಹಂಚಿಕೊಳ್ಳುವ ನಿರೀಕ್ಷೆಯಿದೆ.
ಭಾರತವನ್ನು ಸ್ವಾವಲಂಬಿಯನ್ನಾಗಿಸಲು ಪ್ರಧಾನಿ ಮಾಡಿದ್ದ ಭಾಷಣದಲ್ಲಿ ಭೂಮಿ, ದ್ರವ್ಯತೆ, ಕಾರ್ಮಿಕ ಮತ್ತು ಕಾನೂನುಗಳನ್ನು ಕೇಂದ್ರೀಕರಿಸಿ ಆತ್ಮ ನಿರ್ಭರ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದರು.
ಮಾರ್ಚ್‌ನಲ್ಲಿ ಘೋಷಿಸಲಾದ 1.7 ಲಕ್ಷ ಕೋಟಿ ರೂ.ಗಳ ಪ್ಯಾಕೇಜ್ ಮತ್ತು ಎನ್‌ಬಿಎಫ್‌ಸಿ ಮತ್ತು ಹಣಕಾಸು ವಲಯಕ್ಕೆ ಆರ್‌ಬಿಐ ಘೋಷಿಸಿರುವ ದ್ರವ್ಯತೆ ಕ್ರಮಗಳ ನಂತರದ ಮುಂದುವರಿಕೆಯಾಗಿ ಈ 20 ಲಕ್ಷ ಕೋಟಿ ರೂ. ಪ್ಯಾಕೇಜ್ ಬರುತ್ತಿದೆ.
ವ್ಯಾಪಾರ, ವ್ಯವಹಾರಗಳು ಸ್ಥಗಿತಗೊಂಡಿರುವುದರಿಂದ ಮತ್ತು ದೊಡ್ಡ ಕೈಗಾರಿಕಾ ಘಟಕಗಳ ಸಂಕಷ್ಟದ ಕಾರಣ ಲಾಕ್‌ಡೌನ್‌ನ ತೀವ್ರತೆಯನ್ನು ಭರಿಸಲು ಸಣ್ಣ, ಮದ್ಯಮ ಕೈಗಾರಿಕೆ ವಲಯಕ್ಕೆ ಹಣಕಾಸು ಸಚಿವರು ಪ್ಯಾಕೇಜ್ ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


