ರಾಜ್ಯಗಳೊಂದಿಗೆ ತಾರತಮ್ಯ ಮಾಡಿಲ್ಲ: ವಂದೇ ಭಾರತ್ ಮಿಷನ್ ಕುರಿತು ಪಶ್ಚಿಮ ಬಂಗಾಳ ಆರೋಪ ತಿರಸ್ಕರಿಸಿದ ಕೇಂದ್ರ
ವಂದೇ ಭಾರತ್ ಮಿಷನ್'ನಲ್ಲಿ ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದೆ ಎಂಬ ಆರೋಪವನ್ನು ವಿದೇಶಾಂಗ ಸಚಿವಾಲಯ ತಿರಸ್ಕರಿಸಿದ್ದು, ರಾಜ್ಯಗಳೊಂದಿಗೆ ಕೇಂದ್ರ ಸರ್ಕಾರ ಎಂದಿಗೂ ತಾರತಮ್ಯ ಮಾಡಿಲ್ಲ ಎಂದು ಶುಕ್ರವಾರ ಹೇಳಿದೆ.

ನವದೆಹಲಿ: ವಂದೇ ಭಾರತ್ ಮಿಷನ್'ನಲ್ಲಿ ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ರಾಜ್ಯಕ್ಕೆ ತಾರತಮ್ಯ ಮಾಡುತ್ತಿದೆ ಎಂಬ ಆರೋಪವನ್ನು ವಿದೇಶಾಂಗ ಸಚಿವಾಲಯ ತಿರಸ್ಕರಿಸಿದ್ದು, ರಾಜ್ಯಗಳೊಂದಿಗೆ ಕೇಂದ್ರ ಸರ್ಕಾರ ಎಂದಿಗೂ ತಾರತಮ್ಯ ಮಾಡಿಲ್ಲ ಎಂದು ಶುಕ್ರವಾರ ಹೇಳಿದೆ.
ಪಶ್ಚಿಮ ಬಂಗಾಳ ಸರ್ಕಾರದ ಶಿಕ್ಷಣ ಸಚಿವ ಪಾರ್ಥ ಚಟರ್ಜಿಯವರ ಆರೋಪಕ್ಕೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾತ್ಸವ್ ಅವರು, ರಾಜ್ಯಗಳೊಂದಿಗೆ ಕೇಂದ್ರ ಸರ್ಕಾರ ಎಂದಿಗೂ ತಾರತಮ್ಯ ಮಾಡಿಲ್ಲ ಎಂದು ಹೇಳಿದ್ದಾರೆ.
ವಂದೇ ಭಾರತ್ ಮಿಷನ್ ಪಶ್ಚಿಮ ಬಂಗಾಳ ರಾಜ್ಯದ ಜನತೆಯನ್ನೂ ಒಳಗೊಂಡಂತೆ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ತವರಿಗೆ ಕರೆತರುವ ಉದ್ದೇಶವನ್ನು ಹೊಂದಿದ್ದು, ಈ ವಿಚಾರದಲ್ಲಿ ರಾಜ್ಯಗಳೊಂದಿಗೆ ಕೇಂದ್ರ ಸರ್ಕಾರ ಎಂದಿಗೂ ತಾರತಮ್ಯ ಮಾಡಿಲ್ಲ. ವಿಶ್ವದ ವಿವಿಧ ಭಾಗಗಳಲ್ಲಿ ಸಿಲುಕಿಕೊಂಡಿರುವ ಭಾರತೀಯರು ಈಗಾಗಲೇ 3700 ಜನರು ತಮ್ಮ ಹೆಸರುಗಳನ್ನು ದಾಖಲು ಮಾಡಿಕೊಂಡಿದ್ದಾರೆಂದು ಹೇಳಿದ್ದಾರೆ.
ಈ ಹಿಂದೆ ಟ್ವೀಟ್ ಮಾಡಿದ್ದ ಚಟರ್ಜಿಯವರು ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪ ಮಾಡಿದ್ದರು.
ಜಾರ್ಜಿಯಾದಿಂದ ಗುಜರಾತ್ ರಾಜ್ಯಕ್ಕೆ ಬರಲು ಸಾಕಷ್ಟು ಜನರಿದ್ದಾರೆಂಬುದನ್ನು ನಾವು ನಂಬಬೇಕೆಂದು ವಿದೇಶಾಂಗ ಸಚಿವಾಲಯ ನಮಗೆ ಹೇಳುತ್ತಿದೆಯೇ? ಜಾರ್ಜಿಯಾದಿಂದ ಕೋಲ್ಕತಾಗೆ ಬರಲು ಯಾರೂ ಇಚ್ಛಿಸುತ್ತಿಲ್ಲವೇ?
ಅಲ್ಲದೆ, ಕಿರ್ಗಿಸ್ತಾನ್‌ನಿಂದ ಬಿಹಾರಕ್ಕೆ ಹಿಂತಿರುಗಲು ಸಾಕಷ್ಟು ಜನರಿದ್ದಾರೆ ಆದರೆ ಬಂಗಾಳಕ್ಕೆ ಭಾರತೀಯರ ಕರೆತರಲು ಸಾಧ್ಯವಾಗುತ್ತಿಲ್ಲವೇ? ಈ ಅನ್ಯಾಯವನ್ನು ನಿಲ್ಲಿಸಿ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


