ಕೂಡಿ ಬಾಳಲು ಪತ್ನಿ ವಿರೋಧ; ಬೆಂಕಿ ಹಚ್ಚಿಕೊಂಡು ಪತಿ ಆತ್ಮಹತ್ಯೆಗೆ ಯತ್ನ!
ತನ್ನೊಂದಿಗೆ ಕೂಡಿ ಬಾಳಲು ಪತ್ನಿ ನಿರಾಕರಿಸುತ್ತಿದ್ದಾಳೆ ಎಂದು ಆರೋಪಿಸಿ ವ್ಯಕ್ತಿಯೋರ್ವ ಬೆಂಕಿ ಹಚ್ಚಿಕೊಂಡು ಸಾಯಲು ಯತ್ನಿಸಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಹೈದರಾಬಾದ್: ತನ್ನೊಂದಿಗೆ ಕೂಡಿ ಬಾಳಲು ಪತ್ನಿ ನಿರಾಕರಿಸುತ್ತಿದ್ದಾಳೆ ಎಂದು ಆರೋಪಿಸಿ ವ್ಯಕ್ತಿಯೋರ್ವ ಬೆಂಕಿ ಹಚ್ಚಿಕೊಂಡು ಸಾಯಲು ಯತ್ನಿಸಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಭುವನ್ ರೆಡ್ಡಿ ಎಂಬ 35 ವರ್ಷದ ವ್ಯಕ್ತಿ ತನ್ನ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಸಾಯಲು ಯತ್ನಿಸಿದ್ದು, ಪ್ರಸ್ತುತ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಪೊಲೀಸ್ ಮೂಲಗಳ ಪ್ರಕಾರ 20 ದಿನಗಳ ಹಿಂದೆ ಭುವನ್ ರೆಡ್ಡಿ ಮತ್ತು ಆತನ ಪತ್ನಿ ನಡುವೆ ಜಗಳವಾಗಿತ್ತು. ಬಳಿಕ ಆತನ ಪತ್ನಿ ಆತನನ್ನು ತೊರೆದು ತನ್ನ ಸಹೋದರಿಯ ಮನೆಗೆ ಹೋಗಿದ್ದಳು. ಭುವನ್ ರೆಡ್ಡಿ ಕೂಡ ಕೆಲ ದಿನಗಳ ಬಳಿಕ ಅ ಮನೆಗೆ ಹೋಗಿ ಮನೆಗೆ ಬರುವಂತೆ ಜಗಳ ಮಾಡಿದ್ದ. ಅಲ್ಲದೆ ಜಗಳ ತಾರಕಕ್ಕೇರಿ ವಾಕ್ಸಮರ ಕೈಕೈ ಮಿಲಾಯಿಸುವಂತೆ ಆಗಿತ್ತು. ಇದರಿಂದ ನೊಂದಿದ್ದ ಭುವನ್ ರೆಡ್ಡಿ ಪತ್ನಿ ಆತನ ವಿರುದ್ಧ ಪೊಲೀಸ್ ದೂರು ನೀಡಿದ್ದಳು. ಬಳಿಕವೂ ತನ್ನ ಪ್ರಯತ್ನ ಮುಂದುವರೆಸಿದ್ದ ಭುವನ್ ರೆಡ್ಡಿ ಮನೆಗೆ ಬರುವಂತೆ ಪತ್ನಿಗೆ ಕೇಳಿದ್ದ. ಆದರೆ ಆಕೆ ಅದಕ್ಕೂ ನಿರಾಕರಿಸಿದಾಗ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


