ದೇಶ

ಭಾರತದಲ್ಲಿ ಕೊರೋನಾ ರಣಕೇಕೆ: 82 ಸಾವಿರ ಗಡಿಯತ್ತ ಸೋಂಕಿತರ ಸಂಖ್ಯೆ, ಮಹಾಮಾರಿಗೆ 2,649 ಮಂದಿ ಬಲಿ

ಭಾರತದಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಸೋಂಕಿತರ ಸಂಖ್ಯೆ 82,000 ಗಡಿಯತ್ತ ಸಾಗುತ್ತಿದೆ. ಇದರೊಂದಿಗೆ ವಿಶ್ವದಲ್ಲಿಯೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡ ಚೀನಾವನ್ನು ಸೋಂಕಿತರ ಸಂಖ್ಯೆಯಲ್ಲಿ ಹಿಂದಿಕ್ಕುವತ್ತ ಭಾರತ ದಾಪುಗಾಲು ಇಟ್ಟಿದೆ.

ಭಾರತದಲ್ಲಿ ಕೊರೋನಾ ರಣಕೇಕೆ: 82 ಸಾವಿರ ಗಡಿಯತ್ತ ಸೋಂಕಿತರ ಸಂಖ್ಯೆ, ಮಹಾಮಾರಿಗೆ 2,649 ಮಂದಿ ಬಲಿ
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಸೋಂಕಿತರ ಸಂಖ್ಯೆ 82,000 ಗಡಿಯತ್ತ ಸಾಗುತ್ತಿದೆ. ಇದರೊಂದಿಗೆ ವಿಶ್ವದಲ್ಲಿಯೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡ ಚೀನಾವನ್ನು ಸೋಂಕಿತರ ಸಂಖ್ಯೆಯಲ್ಲಿ ಹಿಂದಿಕ್ಕುವತ್ತ ಭಾರತ ದಾಪುಗಾಲು ಇಟ್ಟಿದೆ. 

ಚೀನಾಡಲ್ಲಿ 82,929 ಸೋಂಕಿತರಿದ್ದು, ಕೇವಲ ಕೆಲವೇ ಸಂಖ್ಯೆಯಲ್ಲಷ್ಟೇ ಭಾರತ ಹಿಂದೆ ಇದೆ. ನಿತ್ಯ ದಾಖಲಾಗುತ್ತಿರುವ ಪ್ರಕರಣಗಳ ವೇಗ ನೊಡಿದರೆ ಇಂದು ಭಾರತ ಚೀನಾವನ್ನು ಹಿಂದಿಕ್ಕುವ ಎಲ್ಲಾ ಸಾಧ್ಯತೆಗಳೂ ಕಂಡು ಬರುತ್ತಿದೆ. 

ಕಳೆದ 24 ಗಂಟೆಗಳಲ್ಲಿ ಒಟ್ಟು 3967 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 100 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 81,970 ಕ್ಕೆ ಏರಿಕೆಯಾಗಿದ್ದು, 2,649 ಮಂದಿ ಬಲಿಯಾಗಿದ್ದಾರೆ. 

81,970 ಮಂದಿ ಸೋಂಕಿತರ ಪೈಕಿ 27,919 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಪ್ರಸ್ತುತ ದೇಶದಲ್ಲಿ 51,401 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.