ದೇಶ

ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಲ್ಲಾ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳು ಪುನಾರಂಭಗೊಳ್ಳಲಿ: ಕೇಂದ್ರಕ್ಕೆ ಸಿಎಂ ಕೇಜ್ರಿವಾಲ್

ಮೇ.17ರ ನಂತರ ಲಾಕ್'ಡೌನ್ ಸಡಿಲಗೊಳಿಸಿದ ಹಿನ್ನೆಲೆಯಲ್ಲಿ ದೇಶದಾದ್ಯಂತ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಹಾಮಾರಿ ಕೊರೋನಾ ವಿರುದ್ಧ ಹೋರಾಡಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೇಂದ್ರ ಸರ್ಕಾರಕ್ಕೆ ಶುಕ್ರವಾರ ಹೇಳಿದ್ದಾರೆ.

ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಲ್ಲಾ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳು ಪುನಾರಂಭಗೊಳ್ಳಲಿ: ಕೇಂದ್ರಕ್ಕೆ ಸಿಎಂ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್
Published On :

ನವದೆಹಲಿ: ಮೇ.17ರ ನಂತರ ಲಾಕ್'ಡೌನ್ ಸಡಿಲಗೊಳಿಸಿದ ಹಿನ್ನೆಲೆಯಲ್ಲಿ ದೇಶದಾದ್ಯಂತ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಹಾಮಾರಿ ಕೊರೋನಾ ವಿರುದ್ಧ ಹೋರಾಡಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಕೇಂದ್ರ ಸರ್ಕಾರಕ್ಕೆ ಶುಕ್ರವಾರ ಹೇಳಿದ್ದಾರೆ. 

ಈ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಕೇಜ್ರಿವಾಲ್ ಅವರು, ಕಂಟೈನ್ಮೆಂಟ್ ಝೋನ್ ಗಳಲ್ಲಿ ಲಾಕ್'ಡೌನ್ ಸಡಿಲಗೊಳಿಸುವುದು ಬೇಡ. ಆದರೆ, ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಲ್ಲಾ ಪ್ರದೇಶಗಳಲ್ಲಿಯೂ ಆರ್ಥಿಕ ಚಟುವಟಿಕೆಗಳು ಪುನರಾರಂಭಗೊಳ್ಳಲು ಅನುಮತಿ ನೀಡಬೇಕಿದೆ. ಇಂತಹ ಸಂದರ್ಭದಲ್ಲಿಯೂ ವೈರಸ್ ಹೆಚ್ಚಾಗುವ ಸಾಧ್ಯತೆಗಳಿವೆ. ಇದಕ್ಕಾಗಿ ನಾವು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆಂದು ಹೇಳಿದ್ದಾರೆ. 

ಖಾಸಗಿ ಕಚೇರಿಗಳು ಹಾಗೂ ಇತರೆ ಆರ್ಥಿಕ ಚಟುವಟಿಕೆಗಳನ್ನು ಪುನರಾರಂಭಿಸಲು ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರಿಗೆ ಸೇವೆಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದ್ದು, ಒಮ್ಮೆಲೆ ಒಂದು ಬಸ್ ನಲ್ಲಿ ಕೇವಲ 20 ಜನರು ಮಾತ್ರ ಪ್ರಯಾಣಿಸಲು ಅನುಮತಿ ನೀಡಲಾಗುತ್ತದೆ. ಬಸ್ ಗಳ ಪ್ರವೇಶ ದ್ವಾರ ಹಾಗೂ ನಿರ್ಗಮನ ದ್ವಾರಗಳಲ್ಲಿ ಒಬ್ಬೊಬ್ಬರು ಅಧಿಕಾರಿಗಳನ್ನು ನಿಯೋಜನೆಗೊಳಿಸಲಾಗುತ್ತಿದ್ದು, ಬಸ್ ನಲ್ಲಿ ಸಾಮಾಜಿಕ ಅಂತರ ಕಾಪಾಡಲಿದ್ದಾರೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.