ದೇಶ

ಜಮ್ಮು-ಕಾಶ್ಮೀರ: ಬುದ್ಗಾಂನಲ್ಲಿದ್ದ ಉಗ್ರರ ಅಡಗು ತಾಣಗಳ ಮೇಲೆ ದಾಳಿ, 5 ಉಗ್ರರ ಬಂಧನ

ಬುದ್ಗಾಂನಲ್ಲಿದ್ದ ಉಗ್ರರ ಅಡಗುತಾಣಗಳ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ದಾಳಿ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ 5 ಮಂದಿಯನ್ನು ಬಂಧನಕ್ಕೊಳಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಮ್ಮು-ಕಾಶ್ಮೀರ: ಬುದ್ಗಾಂನಲ್ಲಿದ್ದ ಉಗ್ರರ ಅಡಗು ತಾಣಗಳ ಮೇಲೆ ದಾಳಿ, 5 ಉಗ್ರರ ಬಂಧನ
ಭದ್ರತಾ ಪಡೆಗಳು
Published On :

ಶ್ರೀನಗರ: ಬುದ್ಗಾಂನಲ್ಲಿದ್ದ ಉಗ್ರರ ಅಡಗುತಾಣಗಳ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ದಾಳಿ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ 5 ಮಂದಿಯನ್ನು ಬಂಧನಕ್ಕೊಳಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಆ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಬುದ್ಗಾಂನಲ್ಲಿ ಉಗ್ರರ ಅಡಗುತಾಣಗಳಿರುವುದಾಗಿ ಖಚಿತ ಮಾಹಿತಿ ಲಭ್ಯವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ 53 ಆರ್ಆರ್ ಹಾಗೂ 153ನೇ ಸಿಆರ್'ಪಿಎಫ್ ಬೆಟಾಲಿಯನ್ ಪಡೆಗಳೊಂದಿಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸಲಾಗಿತ್ತು. 

ಬುದ್ಗಾಂನ ಗ್ರಾಮವೊಂದರಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಈ ವೇಳೆ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಪ್ರಮುಖ ನಾಯಕನೊಂದಿಗೆ ನಂಟು ಹೊಂದಿದ್ದ ಜಹೂರ್ ವಾನಿ ಎಂಬಾತನನ್ನು ಬಂಧಿಸುವಲ್ಲಿ ಭದ್ರತಾಪಡೆಗಳು ಯಶಸ್ವಿಯಾಗಿವೆ. 

ಉಳಿದಂತೆ ಬಂಧನಕ್ಕೊಳಗಾಗಿರುವ ನಾಲ್ವರನ್ನು ಯೂನಿಸ್ ಮಿರ್, ಅಸ್ಲಾಂ ಶೇಖ್, ಪರ್ವೈಜ್ ಶೇಖ್ ಹಾಗೂ ರೆಹ್ಮಾನ್ ಲೋನೆ ಎಂದು ಗುರ್ತಿಸಲಾಗಿದ್ದು, ಈ ನಾಲ್ವರೂ ಬುದ್ಗಾಂನ ಖಾನ್ಸೈಬ್ ಗ್ರಾಮದ ನಿವಾಸಿಗಳೇ ಆಗಿದ್ದಾರೆಂದು ಹೇಳಲಾಗುತ್ತಿದೆ. 

ನಾಲ್ವರಲ್ಲಿ ರೆಹ್ಮಾನ್ ಲೋನಾ ಎಂಬಾದ ಎಲ್ಇಟಿ ಉಗ್ರರು ನೆಲೆಯೂರಲು ಅವಕಾಶ ಮಾಡಿಕೊಡುತ್ತಿದ್ದ ಎಂದು ತಿಳಿದುಬಂದಿದೆ. ಕೆಲ ತಿಂಗಳಿನಿಂದಲೂ ಈ ಗುಂಪು ಅಡಗಿಕುಳಿತು ತಮ್ಮ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದ್ದರು ಎಂದು ವರದಿಗಳು ತಿಳಿಸಿವ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.