ಕೇರಳಾಗೆ ಚೆನ್ನೈ ನಂಜು: ವಯನಾಡು, ಕಾಸರಗೋಡಿನಲ್ಲಿ ಕೊವಿಡ್-19 ಪ್ರಕರಣ ಹೆಚ್ಚಳ
ಕೇರಳಾದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಂದಿದೆ ಎನ್ನುವಾಗಲೇ ವಯನಾಡು ಮತ್ತು ಕಾಸರಗೋಡಿನಲ್ಲಿ ಮತ್ತೆ ಕೊವಿಡ್ 19 ಪ್ರಕರಣಗಳು ಹೆಚ್ಚುತ್ತಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ.

ವಯನಾಡು: ಕೇರಳಾದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಂದಿದೆ ಎನ್ನುವಾಗಲೇ ವಯನಾಡು ಮತ್ತು ಕಾಸರಗೋಡಿನಲ್ಲಿ ಮತ್ತೆ ಕೊವಿಡ್ 19 ಪ್ರಕರಣಗಳು ಹೆಚ್ಚುತ್ತಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿದೆ.
ಇತ್ತೀಚಿಗೆ ಚೆನ್ನೈನ ಕೊರೋನಾ ಹಾಟ್ ಸ್ಪಾಟ್ ಕೊಯಂಬೆಡು ಮಾರುಕಟ್ಟೆಯಿಂದ ಬಂದ ಲಾರಿ ಚಾಲಕನಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಅಧಿಕಾರಿಗಳಿಗೆ ಚಾಲಕನ ಸಂಪರ್ಕಿತರನ್ನು ಪತ್ತೆ ಹಚ್ಚುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ.
52 ವರ್ಷದ ಲಾರಿ ಚಾಲಕನ ಸಂಬಂಧಿಗಳು ಸೇರಿದಂತೆ ಆತನ ಪ್ರಾಥಮಿಕ ಸಂಪರ್ಕದಲ್ಲಿದ್ದ 15 ಮಂದಿಗೆ ಈಗಾಗಲೇ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಶುಕ್ರವಾರ ವಯನಾಡಿನಲ್ಲಿ ಮತ್ತೆ ಐದು ಹೊಸ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಕೇರಳದ ಮತ್ತೊಂದು ಜಿಲ್ಲೆ ಕಾಸರಗೋಡಿನಲ್ಲಿ ಹಲವು ದಿನಗಳ ನಂತರ ನಿನ್ನೆ ಮತ್ತೆ 13 ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


