ವಲಸಿಗ ಕಾರ್ಮಿಕರ ಬಗ್ಗೆ ಉತ್ತರ ಪ್ರದೇಶ ಸಚಿವರ ವಿವಾದಾತ್ಮಕ ಹೇಳಿಕೆ!
ದೇಶಾದ್ಯಂತ ಲಾಕ್ ಡೌನ್ ಹಿನ್ನೆಲೆಯಲ್ಲಿ ವಲಸಿಗ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಯತ್ನಿಸುತ್ತಿದ್ದರೆ ಉತ್ತರ ಪ್ರದೇಶ ಸಚಿವ ಉದಯ್ ಭಾನ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಲಖನೌ: ದೇಶಾದ್ಯಂತ ಲಾಕ್ ಡೌನ್ ಹಿನ್ನೆಲೆಯಲ್ಲಿ ವಲಸಿಗ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಯತ್ನಿಸುತ್ತಿದ್ದರೆ ಉತ್ತರ ಪ್ರದೇಶ ಸಚಿವ ಉದಯ್ ಭಾನ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸರ್ಕಾರಗಳಿಂದ ನಿರಂತರ ಮನವಿಯ ಹೊರತಾಗಿಯೂ ವಲಸಿಗ ಕಾರ್ಮಿಕರು ಊರುಗಳಿಗೆ ತೆರಳುತ್ತಿದ್ದಾರೆ. ಈ ಪೈಕಿ ಕೆಲವರು ಡಕಾಯಿತರು ಕಳ್ಳರಂತೆ ವರ್ತಿಸುತ್ತಿದ್ದಾರೆ ಎಂದು ಉದಯ ಭಾನ್ ಸಿಂಗ್ ಆರೋಪಿಸಿದ್ದಾರೆ.
ವಲಸಿಗ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರ ಸಂವೇದನೆಯಿಂದ ವರ್ತಿಸುತ್ತಿದೆ. ಉತ್ತರ ಪ್ರದೇಶದಲ್ಲಿ ಕಾರ್ಮಿಕರಿಗಾಗಿ ಆಹಾರ ಹಾಗೂ ಇನ್ನಿತರ ಅಗತ್ಯಗಳನ್ನು ಪೂರೈಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಮಿಕರು ಇರುವ ಸ್ಥಳಗಳಲ್ಲಿಯೇ ಉಳಿಯುವುದಕ್ಕಾಗಿ ಈ ವ್ಯವಸ್ಥೆ ಮಾಡಲಾಗಿದೆ. ಆದರೆ ಕೆಲವರು ಕಳ್ಳರು ಡಕಾಯಿತರಂತೆ ಕೃಷಿ ಭೂಮಿಗಳ ಮೂಲಕ ಹಾದು ಹೋಗಿ ತಮ್ಮ ಊರು ಸೇರಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ಸಚಿವರ ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತವಾಗತೊಡಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


