ಮಹಾರಾಷ್ಟ್ರದಲ್ಲಿ ಬಸ್ಸು-ಟ್ರಕ್ ಢಿಕ್ಕಿ: 4 ವಲಸೆ ಕಾರ್ಮಿಕರು ಸಾವು, 22 ಮಂದಿಗೆ ಗಾಯ
ವಲಸೆ ಕಾರ್ಮಿಕರು ರಸ್ತೆ ಅಪಘಾತದಲ್ಲಿ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಬಸ್ಸು ಟ್ರಕ್ ಗೆ ಢಿಕ್ಕಿ ಹೊಡೆದು ನಾಲ್ವರು ವಲಸೆ ಕಾರ್ಮಿಕರು ಮೃತಪಟ್ಟು 22 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಯವತ್ಮಲ್ ನಲ್ಲಿ ಮಂಗಳವಾರ ನಸುಕಿನ ಜಾವ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ: ವಲಸೆ ಕಾರ್ಮಿಕರು ರಸ್ತೆ ಅಪಘಾತದಲ್ಲಿ ಮಂಗಳವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಬಸ್ಸು ಟ್ರಕ್ ಗೆ ಢಿಕ್ಕಿ ಹೊಡೆದು ನಾಲ್ವರು ವಲಸೆ ಕಾರ್ಮಿಕರು ಮೃತಪಟ್ಟು 22 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಯವತ್ಮಲ್ ನಲ್ಲಿ ಮಂಗಳವಾರ ನಸುಕಿನ ಜಾವ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ಸು ಮಹಾರಾಷ್ಟ್ರದ ಸೋಲಾಪುರದಿಂದ ಜಾರ್ಖಂಡ್ ಗೆ ಸಂಚರಿಸುತ್ತಿತ್ತು. ಇಂದು ನಸುಕಿನ ಜಾವ 3.30 ಸುಮಾರಿಗೆ ಸೋಲಾಪುರದಿಂದ ನಾಗ್ಪುರ ರೈಲ್ವೆ ನಿಲ್ದಾಣದ ಕಡೆ ಪ್ರಯಾಣಿಸುತ್ತಿದ್ದ ಬಸ್ಸಿನಲ್ಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಅವರು ನಾಗ್ಪುರ ರೈಲು ನಿಲ್ದಾಣದಿಂದ ಶ್ರಮಿಕ್ ವಿಶೇಷ ರೈಲಿನಲ್ಲಿ ತಮ್ಮೂರು ಜಾರ್ಖಂಡ್ ಗೆ ಹೋಗಲು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ ನೂರುಲ್ ಹಸನ್ ತಿಳಿಸಿದ್ದಾರೆ.
ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಗೆ ಡಿಕ್ಕಿ ಹೊಡೆಯಿತು. ನಾಲ್ವರು ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದು ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆಕಸ್ಮಿಕ ಸಾವು ಎಂದು ಕೇಸು ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


