ಕೊವಿಡ್-19: ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ನಿಂದ ವಿನಾಯಿತಿ
ಮೇ ೩೧ರವರೆಗೆ ಲಾಕ್‌ಡೌನ್ ವಿಸ್ತರಿಸಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಕಚೇರಿ ಹಾಜರಾತಿಗೆ ಬಯೋಮೆಟ್ರಿಕ್ ಬಳಕೆಯನ್ನು ಮುಂದಿನ ಆದೇಶದವರೆಗೆ ಅಮಾನತ್ತಿನಲ್ಲಿಡಲಾಗಿದೆ.

ನವದೆಹಲಿ: ಮೇ ೩೧ರವರೆಗೆ ಲಾಕ್‌ಡೌನ್ ವಿಸ್ತರಿಸಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಕಚೇರಿ ಹಾಜರಾತಿಗೆ ಬಯೋಮೆಟ್ರಿಕ್ ಬಳಕೆಯನ್ನು ಮುಂದಿನ ಆದೇಶದವರೆಗೆ ಅಮಾನತ್ತಿನಲ್ಲಿಡಲಾಗಿದೆ.
ಕೇಂದ್ರ ಸಿಬ್ಬಂದಿ ಮತ್ತು ಸಾರ್ವಜನಿಕ ಕುಂದುಕೊರತೆ ಸಚಿವಾಲಯ ಈ ವಿಷಯ ತಿಳಿಸಿದ್ದು, ಕೊವಿಡ್ -19 ಸೋಂಕು ನಿಯಂತ್ರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದ್ದು, ಸಿಬ್ಬಂದಿಯ ಹಾಜರಾತಿಯನ್ನು ಉಪಕಾರ್ಯದರ್ಶಿ ಮಟ್ಟದ ಅಧಿಕಾರಿಗಳು ದಾಖಲಾತಿಯನ್ನು ಪರಿಶೀಲಿಸಬೇಕು. ದಿನಬಿಟ್ಟು ದಿನ ಶೇಕಡ ೫೦ರಷ್ಟು ಸಿಬ್ಬಂದಿ ಕೆಲಸಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.
ಹಾಜರಾತಿ ಅಗತ್ಯವಿಲ್ಲದ ಅಧಿಕಾರಿಗಳು ಮನೆಯಿಂದಲೇ ದೂರ ಸಂಪರ್ಕ ವ್ಯವಸ್ಥೆ ಮೂಲಕ ಕಚೇರಿ ಆಡಳಿತ ವ್ಯವಸ್ಥೆಯನ್ನು ನೋಡಿಕೊಳ್ಳುವಂತೆ ಸೂಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


