ಅರ್ನಬ್ ಗೋಸ್ವಾಮಿಗೆ 3 ವಾರ ಬಂಧನ ಭೀತಿಯಿಲ್ಲ: ಮಧ್ಯಂತರ ರಕ್ಷಣೆ ವಿಸ್ತರಿಸಿದ ಸುಪ್ರೀಂ ಕೋರ್ಟ್
ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಸದ್ಯಕ್ಕೆ ಬಂಧನ ಭೀತಿಯಿಂದ ಪಾರಾಗಿದ್ದು, ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಧ್ಯಂತರ ರಕ್ಷಣೆ ಅವಧಿಯನ್ನು 3 ವಾರಗಳ ಕಾಲ ವಿಸ್ತರಿಸಿದೆ.

ನವದೆಹಲಿ: ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಸದ್ಯಕ್ಕೆ ಬಂಧನ ಭೀತಿಯಿಂದ ಪಾರಾಗಿದ್ದು, ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಧ್ಯಂತರ ರಕ್ಷಣೆ ಅವಧಿಯನ್ನು 3 ವಾರಗಳ ಕಾಲ ವಿಸ್ತರಿಸಿದೆ.
ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಂಗಳವಾರದ ತನ್ನ ತೀರ್ಪಿನಲ್ಲಿ, ಮಧ್ಯಂತರ ರಕ್ಷಣೆಯನ್ನು ಇನ್ನೂ ಮೂರು ವಾರಗಳವರೆಗೆ ವಿಸ್ತರಿಸಿದೆ. ಪಾಲ್ಘರ್ ಪ್ರಕರಣ ಸೇರಿದಂತೆ ರಿಪಬ್ಲಿಕ್ ಟಿವಿಯಲ್ಲಿ ನಡೆದ ಚರ್ಚೆಗಳಲ್ಲಿ ಅವರ ಹೇಳಿಕೆ ಸಂಬಂಧ ನಡೆದ ವಿಚಾರಣೆಯಲ್ಲಿ ಈ ಆದೇಶ ನೀಡಲಾಗಿದೆ.
"ಅರ್ಜಿದಾರರ ವಿರುದ್ಧ ಮೂರು ವಾರಗಳವರೆಗೆ ಯಾವುದೇ ಬಲವಂತದ ಕ್ರಮದಿಂದ ನ್ಯಾಯಾಲಯವು ಮಧ್ಯಂತರ ರಕ್ಷಣೆ ನೀಡುತ್ತದೆ" ಎಂದು ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಮೂವರು ನ್ಯಾಯಾಧೀಶರ ನ್ಯಾಯಪೀಠ ತೀರ್ಪಿನಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


