ದೇಶ

ಉತ್ತರ ಪ್ರದೇಶದಲ್ಲಿ ವಲಸೆ ಕಾರ್ಮಿಕರಿದ್ದ ವಾಹನ ಮಗುಚಿಬಿದ್ದು 3 ಮಹಿಳೆಯರ ಸಾವು, 17 ಮಂದಿಗೆ ಗಾಯ

ಮಿನಿ ಟ್ರಕ್ ನ ಚಕ್ರ ಸ್ಫೋಟಗೊಂಡು ಅದರಲ್ಲಿ ಪ್ರಯಾಣಿಸುತ್ತಿದ್ದ ಮೂವರು ವಲಸೆ ಕಾರ್ಮಿಕರು ಮೃತಪಟ್ಟು 17 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮಹೊಬಾ ಎಂಬಲ್ಲಿ ನಡೆದಿದೆ. ಮೃತ ಕಾರ್ಮಿಕರು ಎಲ್ಲರೂ ಮಹಿಳೆಯರಾಗಿದ್ದಾರೆ.

ಉತ್ತರ ಪ್ರದೇಶದಲ್ಲಿ ವಲಸೆ ಕಾರ್ಮಿಕರಿದ್ದ ವಾಹನ ಮಗುಚಿಬಿದ್ದು 3 ಮಹಿಳೆಯರ ಸಾವು, 17 ಮಂದಿಗೆ ಗಾಯ
ಗಾಯಗೊಂಡವರನ್ನು ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ಯುತ್ತಿರುವುದು
Published On :

ಮಹೊಬ(ಉತ್ತರ ಪ್ರದೇಶ): ಮಿನಿ ಟ್ರಕ್ ನ ಚಕ್ರ ಸ್ಫೋಟಗೊಂಡು ಅದರಲ್ಲಿ ಪ್ರಯಾಣಿಸುತ್ತಿದ್ದ ಮೂವರು ವಲಸೆ ಕಾರ್ಮಿಕರು ಮೃತಪಟ್ಟು 17 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮಹೊಬಾ ಎಂಬಲ್ಲಿ ನಡೆದಿದೆ. ಮೃತ ಕಾರ್ಮಿಕರು ಎಲ್ಲರೂ ಮಹಿಳೆಯರಾಗಿದ್ದಾರೆ. ಉತ್ತರ ಪ್ರದೇಶದ ಮಹೊಬಾ ಜಿಲ್ಲೆಯ ಕಮ್ಲ್ ಪುರ್ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ಮಧ್ಯ ಪ್ರದೇಶದ ಛತರ್ಪುರ್ ನಿಂದ ಮಿನಿ ಟ್ರಕ್ ನಲ್ಲಿ ವಸ್ತುಗಳನ್ನು ಸಾಗಿಸುತ್ತಿದ್ದರು. ಟ್ರಕ್ ನಲ್ಲಿ 22 ಮಂದಿ ಪ್ರಯಾಣಿಸುತ್ತಿದ್ದು ಈ ಸಂದರ್ಭದಲ್ಲಿ ಮಗುಚಿಬಿದ್ದಿದೆ.

ಜಿಲ್ಲಾಧಿಕಾರಿಗಳು ದುರ್ಘಟನೆ ನಡೆದ ಸ್ಥಳಕ್ಕೆ ಧಾವಿಸಿದ್ದು ಕ್ರೇನ್ ಮೂಲಕ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ದೆಹಲಿಯಿಂದ ಕೂಲಿ ಕಾರ್ಮಿಕರನ್ನು ಮಿನಿ ಟ್ರಕ್ ಹೊತ್ತು ಸಾಗುತ್ತಿತ್ತು ಎಂದು ಮಹೊಬಾ ಪೊಲೀಸ್ ಸೂಪರಿಂಟೆಂಡೆಂಟ್ ಎಂ ಎಲ್ ಪಟಿದಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.