ಕಾಶ್ಮೀರ: ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಹತ್ಯೆ
ಜಮ್ಮು-ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಮಂಗಳವಾರ ಎನ್ ಕೌಂಟರ್ ಮಾಡಲಾಗಿದೆ. ಈ ವೇಳೆ ಸಿಆರ್ ಪಿಎಫ್ ಯೋಧ ಹಾಗೂ ಕಾಶ್ಮೀರದ ಪೊಲೀಸರೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಮಂಗಳವಾರ ಎನ್ ಕೌಂಟರ್ ಮಾಡಲಾಗಿದೆ. ಈ ವೇಳೆ ಸಿಆರ್ ಪಿಎಫ್ ಯೋಧ ಹಾಗೂ ಕಾಶ್ಮೀರದ ಪೊಲೀಸರೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶ್ರೀನಗರದ ನವಕಾದಲ್ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಹತರಾದ ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ. ಆದರೆ ಈ ಪೈಕಿ ಓರ್ವ ಉಗ್ರ ಶ್ರೀನಗರ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೀಡಾದ ಮತ್ತೊಬ್ಬ ಉಗ್ರ ವಿದೇಶಿ ಪ್ರಜೆಯಾಗಿರುವ ಸಾಧ್ಯತೆ ಇದೆ. ಹತ್ಯೆಯಾದ ಉಗ್ರರಿಂದ ಶಸ್ತ್ರಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ರಾತ್ರಿಯಿಂದಲೇ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ಅಂತಿಮವಾಗಿ ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಬಿಎಸ್‌ಎನ್‌ಎಲ್ ಪೋಸ್ಟ್‌ಪೇಯ್ಡ್ ಹೊರತುಪಡಿಸಿ ಮೊಬೈಲ್ ಇಂಟರ್ನೆಟ್ ಮತ್ತು ಮೊಬೈಲ್ ಟೆಲಿಫೋನಿ ಸೇವೆಗಳನ್ನು ಶ್ರೀನಗರದಲ್ಲಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


