ಎಂತಹ ವೈಭೋಗ: ಕ್ವಾರಂಟೈನ್ ಕೇಂದ್ರದಲ್ಲಿ ಯುವತಿಯರ ನಂಗಾನಾಚ್, ವಿಡಿಯೋ ವೈರಲ್!
ಕೊರೋನಾ ಸೋಂಕು ಹರಡದಂತೆ ಕ್ವಾರಂಟೈನ್ ಮಾಡಲಾಗಿದ್ದ ಕೇಂದ್ರವೊಂದರಲ್ಲಿ ಯುವತಿಯರಿಂದ ಅಶ್ಲೀಲ ಡ್ಯಾನ್ಸ್ ಮಾಡಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಪಾಟ್ನಾ: ಕೊರೋನಾ ಸೋಂಕು ಹರಡದಂತೆ ಕ್ವಾರಂಟೈನ್ ಮಾಡಲಾಗಿದ್ದ ಕೇಂದ್ರವೊಂದರಲ್ಲಿ ಯುವತಿಯರಿಂದ ಅಶ್ಲೀಲ ಡ್ಯಾನ್ಸ್ ಮಾಡಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ಬಿಹಾರದ ಸಮಸ್ತಪುರ ಜಿಲ್ಲೆಯ ಮದ್ಯ ವಿದ್ಯಾಲಯದಲ್ಲಿ ಹಲವನ್ನು ಕ್ವಾರಂಟೈನ್ ಮಾಡಲಾಗಿದೆ. ಇಲ್ಲಿಗೆ ಹೊರಗಿನಿಂದ ಯುವತಿಯರನ್ನು ಕರೆತಂದು ಅಶ್ಲೀಲ ಹಾಡುಗಳಿಗೆ ಡ್ಯಾನ್ಸ್ ಮಾಡಿಸಲಾಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಶಾಲೆಯ ಆವರದಲ್ಲಿಯೇ ಈ ಡ್ಯಾನ್ಸ್ ಕಾರ್ಯಕ್ರಮ ನಡೆದಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಹೆಚ್ಚುವರಿ ಜಿಲ್ಲಾಧಿಕಾರಿ, ಕ್ವಾರಂಟೈನ್ ಕೇಂದ್ರದಲ್ಲಿ ನಂಗಾನಾಚ್ ಕಾರ್ಯಕ್ರಮ ಆಯೋಜಿಸಿರುವ ಕುರಿತು ಮಾಹಿತಿ ಬಂದಿದೆ. ಕ್ವಾರಂಟೈನ್ ಕೇಂದ್ರಕ್ಕೆ ಸಾರ್ವಜನಿಕರಿಗೆ ಯಾವುದೇ ಪ್ರವೇಶ ನೀಡಿಲ್ಲ. ಕಾರ್ಯಕ್ರಮ ಆಯೋಜನೆ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ದೇಶದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತದೆ ಇದೆ. ಕಳೆದ 24 ಗಂಟೆಯಲ್ಲೇ 5,611 ಮಂದಿಗೆ ಸೋಂಕು ತಗುಲಿದ್ದು ಸೋಂಕಿತರ ಸಂಖ್ಯೆ 1,06,750ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 3,303ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


