ಮೇ 25 ರಿಂದ ದೇಶಿಯ ವಿಮಾನ ಹಾರಾಟ ಆರಂಭ: ಹರ್ದೀಪ್ ಸಿಂಗ್ ಪುರಿ
ದೇಶಿಯ ವಿಮಾನ ಹಾರಾಟಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ತಿಂಗಳ ೨೫ರಿಂದ ಹಂತ ಹಂತವಾಗಿ ವಿಮಾನ ಸೇವೆಗಳು ಆರಂಭಗೊಳ್ಳಲಿವೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ತಿಳಿಸಿದ್ದಾರೆ.

ನವದೆಹಲಿ: ದೇಶಿಯ ವಿಮಾನ ಹಾರಾಟಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ತಿಂಗಳ ೨೫ರಿಂದ ಹಂತ ಹಂತವಾಗಿ ವಿಮಾನ ಸೇವೆಗಳು ಆರಂಭಗೊಳ್ಳಲಿವೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ತಿಳಿಸಿದ್ದಾರೆ.
ಈ ಸಂಬಂಧ ವಿಮಾನಯಾನ ಸಂಸ್ಥೆಗಳು, ವಿಮಾನ ನಿಲ್ದಾಣಗಳಿಗೆ ಮಾಹಿತಿ ರವಾನಿಸಲಾಗಿದೆ.
ಕೊರೋನಾ ವೈರಸ್ ಹರಡುವುದನ್ನು ತಡೆಯುವುದಕ್ಕಾಗಿ ಮಾರ್ಚ್ 25 ರಿಂದ ಎಲ್ಲ ದೇಶಿಯ ಹಾಗೂ ಅಂತರಾಷ್ಟ್ರೀಯ ವಿಮಾನಗಳ ಹಾರಾಟವನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿತ್ತು. ಲಾಕ್ ಡೌನ್ ಅವಧಿಯಲ್ಲಿ ಸರಕು ಸಾಗಾಣಿಕೆ, ಕೆಲ ವಿಶೇಷ ಸೇವೆಗಳ ವಿಮಾನಗಳ ಹಾರಾಟಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ೨೦೨೦ ಮೇ ೨೫ ರಿಂದ ದೇಶಿಯ ವಿಮಾನಗಳ ಪ್ರಯಾಣ ಆರಂಭವಾಗಲಿದೆ.
ಹಂತ ಹಂತವಾಗಿ ವಿಮಾನಗಳ ಸೇವೆಗಳ ಲಭ್ಯವಾಗಲಿವೆ. ಎಲ್ಲ ವಿಮಾನ ನಿಲ್ದಾಣಗಳು, ವಿಮಾನ ಸಂಸ್ಥೆಗಳಿಗೆ ಈ ಸಂಬಂಧ ಮಾಹಿತಿ ರವಾನಿಸಲಾಗಿದೆ. ಸಿದ್ದವಾಗಿರುವುಂತೆ ಸೂಚಿಸಿದ್ದೇವೆ. ಪ್ರಯಾಣಿಕರ ಸಂಚಾರ, ಜಾಗೃತೆಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಸಚಿವಾಲಯ ಸದ್ಯದಲ್ಲೇ ಬಿಡುಗಡೆಮಾಡಲಿದೆ ಎಂದು ಹರದೀಪ್ ಸಿಂಗ್ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


